21 C
Karnataka
Saturday, November 23, 2024

ಮೂಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳಿ೦ದ ಅನಿರೀಕ್ಷಿತ ಭೇಟಿ ; ದೊಡ್ಡ ಪ್ರಮಾಣದ ಹಣ ಪತ್ತೆ

ಮಂಗಳೂರು: ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಮೂಡ ಕಚೇರಿಗೆ ಮಾ. 13ರಂದು ಸಂಜೆ ಮಂಗಳೂರು ಲೋಕಾಯುಕ್ತ
ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಿದರು.
ಪರಿಶೀಲನೆ ನಡೆಸಿದಾಗ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿಗಳಲ್ಲಿ ದೊಡ್ಡ ಪ್ರಮಾಣದ ಹಣವಿದ್ದು, ಸೂಕ್ತ ಉತ್ತರ ಸಿಕ್ಕಿರುವುದಿಲ್ಲ, ಕಚೇರಿಯಲ್ಲಿ ಹಣದ ಬ್ಯಾಗ್ ಪತ್ತೆಯಾಗಿತ್ತದೆ. ಪರಿಶೀಲನೆ ನಡೆಸುತ್ತಿರುವ ವೇಳೆ ಹಲವು ಸಾರ್ವಜನಿಕರು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಹಾಗೂ ಕಚೇರಿಯಲ್ಲಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳ ಕುರಿತು ಹೇಳಿಕೊಂಡಿರುತ್ತಾರೆ. ಪರಿಶೀಲನೆ ಸಂದರ್ಭ ದೀರ್ಘಕಾಲದಿಂದ ವಿಲೇವಾರಿಯಾಗದ ಹಲವಾರು ಅರ್ಜಿದಾರರ ಕಡತಗಳು ಸಿಕ್ಕಿರುತ್ತದೆ. ಅಧಿಕಾರಿಗಳು ಬ್ರೋಕರ್ ಗಳೊಡನೆ ಫೋನ್ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಾಗಿ ಸಾಕ್ಷಿ ದೊರೆತಿರುತ್ತದೆ. ಈ ಹಿನ್ನಲೆಯಲ್ಲಿ ಮೂಡ ಕಛೇರಿ ಜಾಲದ ಬಗ್ಗೆ ತನಿಖೆ ಮುಂದುವರೆದಿರುತ್ತದೆ.
ಕರ್ನಾಟಕ ಲೋಕಾಯುಕ್ತ, ಮಂಗಳೂರು ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಚಲುವರಾಜು, ಬಿ, ಡಾ| ಗಾನ ಪಿ ಕುಮಾರ್, ಹಾಗೂ ಪೊಲೀಸ್ ನಿರೀಕ್ಷಕ ಅಮಾನುಲ್ಲಾ.ಎ, ಸುರೇಶ್ ಕುಮಾರ್.ಪಿ ಅವರು ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ಕೈಗೊಂಡಿರುತ್ತಾರೆ ಎ೦ದು ಲೋಕಾಯುಕ್ತ ಪ್ರಕಟನೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles