ಬೆಂಗಳೂರು: ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾ೦ಕ ಪ್ರಕಟಿಸಿದ್ದು ದಕ್ಷಿಣ ಕನ್ನಡ,ಉಡುಪಿ-ಚಿಕ್ಕಮಗಳೂರುಕ್ಷೇತ್ರಗಳಲ್ಲಿ ಎಪ್ರಿಲ್ 26ರ೦ದು ಮತದಾನ ನಡೆಯಲಿದೆ.ಜೂನ್ 4 ರಂದು ಫಲಿತಾಂಶಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಪ್ರಥಮ ಹ೦ತದಲ್ಲಿ 14 ಕ್ಷೇತ್ರಗಳಲ್ಲಿ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.
ಪ್ರಥಮ ಹ೦ತ:ಮತದಾನ ದಿನಾಂಕ ಎ.26
ಎ.26ರ೦ದು ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮೈಸೂರು-ಕೊಡಗು, ಚಾಮರಾಜ ನಗರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಮಾರ್ಚ್ 28ರ೦ದು ನಾಮಪತ್ರಸಲ್ಲಿಕೆಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ.ಎ.4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.ಎ.5 ರ೦ದು ನಾಮಪತ್ರಗಳ ಪರಿಶೀಲನೆ .ಎ.8 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ. ಎ.26 ರಂದು ಮತದಾನ ನಡೆಯಲಿದೆ.
ಎರಡನೇ ಹಂತ:ಮತದಾನ ಮೇ 7
ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕೋಡಿ, ಉತ್ತರಕನ್ನಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾವೇರಿ, ಧಾರವಾಡ,ಶಿವಮೊಗ್ಗ, ದಾವಣಗೆರೆ
ಎ. 12 ನಾಮಪತ್ರಸಲ್ಲಿಕೆಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ.ಎ.19 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ .ಎ.20 ನಾಮಪತ್ರಗಳ ಪರಿಶೀಲನೆ.ಎ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ .
ಮೇ 7 ರಂದು ಮತದಾನ ನಡೆಯಲಿದೆ
ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್ 19 ರಿಂದ ಪ್ರಾರಂಭವಾಗಲಿದ್ದು, ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ .ಎಪ್ರಿಲ್ 19 ರಂದು ಮೊದಲ ಹಂತ, ಎಪ್ರಿಲ್ 26 ರಂದು ಎರಡನೇ ಹಂತ, ಮೇ 7 ರಂದು ಮೂರನೇ ಹಂತ, ಮೇ 13 ರಂದು ನಾಲ್ಕನೇ ಹಂತ, ಮೇ 20 ರಂದು ಐದನೇ ಹಂತ, ಮೇ 25 ರಂದು ಆರನೇ ಹಂತ ಮತ್ತು ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.