ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಬಿಕರ್ನಕಟ್ಟೆಯ ಶ್ರೀ ಹರಿಹರ ಪಾಂಡುರಂಗ ಭವನದಲ್ಲಿ ನಡೆಸಲಾಯಿತು
ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ಮತ್ತೊಮ್ಮೆ ಪ್ರಧಾನ ಸೇವಕರಾಗಲಿರುವ ಸಂದರ್ಭದಲ್ಲಿ ನಮ್ಮ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟರವರನ್ನು ದಾಖಲೆಯ ಮತಗಳ ಅಂತರದಿಂದ ಗೆಲ್ಲಿಸೋಣ. ಆ ಮೂಲಕ ದೇಶವನ್ನು ಪರಮವೈಭವ ಸ್ಥಾನದಲ್ಲಿ ನೋಡುವ ಶತಕೋಟಿ ಭಾರತೀಯರ ಕನಸನ್ನು ನನಸಾಗಿಸಲು ಶ್ರಮಿಸುತ್ತಿರುವ ನರೇಂದ್ರ ಮೋದಿಯವರ ಕೈ ಬಲಪಡಿಸೋಣವೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಂಡಲದ ಚುನಾವಣಾ ಪ್ರಭಾರಿ ರಾಕೇಶ್ ರೈ, ಲೋಕಸಭಾ ಚುನಾವಣಾ ಮಂಡಲ ಪ್ರಭಾರಿಗಳಾದ ರವಿಶಂಕರ್ ಮಿಜಾರ್, ಲೋಕಸಭಾ ಚುನಾವಣಾ ಮಂಡಲ ಸಂಚಾಲಕ ವಿಜಯ್ ಕುಮಾರ್ ಶೆಟ್ಟಿ, ಪಕ್ಷದ ಹಿರಿಯ ನಾಯಕ ಮೋನಪ್ಪ ಭಂಡಾರಿ, ಮಹಾಶಕ್ತಿ ಕೇಂದ್ರದ ಉಸ್ತುವಾರಿ ಉಮಾನಾಥ ಬೋಳಾರ್, ಮಂಡಲದ ಉಪಾಧ್ಯಕ್ಷಅಜಯ್ ಕುಲಶೇಖರ, ಪೂರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಚಂದ್ರ ಸೇರಿದಂತೆ ಪೂರ್ವಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.