19.9 C
Karnataka
Saturday, November 16, 2024

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ. 3ರಂದು ನಾಮಪತ್ರ ಸಲ್ಲಿಕೆ: ಹರೀಶ್ ಕುಮಾರ್

ಮಂಗಳೂರು: ದ.ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎ೦ದು ದ.ಕನ್ನಡ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.
ಜಿಲ್ಲಾ ಕಾ೦ಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದರು.
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಏ. 11ರಂದು ಸುಳ್ಯ, 12ರಂದು ಮುಲ್ಕಿ, 13ರಂದು ಪುತ್ತೂರು,14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ, 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳಕ್ಕೆ ಅಭ್ಯರ್ಥಿ ಸಹಿತ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪುತ್ತೂರಿಗೆ ಆಗಮಿಸಿ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದರು.
ಏ. 19ರಿಂದ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ಮಾ. 24ಕ್ಕೆ ಪ್ರಚಾರ ಕಾರ್ಯ ಅಂತ್ಯವಾಗಲಿದ್ದು, 26ರಂದು ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರಂತೆ ರಾಜಕೀಯದ ಜೊತೆಗೆ ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿರುವ ಪದ್ಮರಾಜ್ ಆರ್. ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಮರ್ಥ ಹಾಗೂ ಉತ್ತಮ ಅಭ್ಯರ್ಥಿಯನ್ನು ನೇಮಕ ಮಾಡಿರುವ ಕಾರಣಕ್ಕೆ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸುತ್ತೆನೆ ಎ೦ದರು.
ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಹೊಸಮುಖದ ಅಗತ್ಯ ಪಕ್ಷಕ್ಕಿತ್ತು. ಇದೀಗ ಈ ಕೊರತೆ ನೀಗಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಪಕ್ಷ ಆಯ್ಕೆ ಮಾಡಿದೆ. ನಾವು ಕಾರ್ಯಕರ್ತರು. ಕಾಂಗ್ರೆಸಿನ ಇತಿಹಾಸವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವಂತೆ ನಾವು ಮಾಡುತ್ತೇವೆ ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹೊಸ ಮುಖಕ್ಕೆ ಅವಕಾಶ ನೀಡುವ ಮೂಲಕ ಪಕ್ಷ ಕಾರ್ಯಕರ್ತರ ಬೇಡಿಕೆಗೆ ಮಣೆ ಹಾಕಿದೆ. ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗಾಗಿ ಹೋರಾಡುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ. ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles