17.5 C
Karnataka
Friday, November 22, 2024

ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಶಾಸಕ ಹರೀಶ್ ಪೂಂಜ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಲೇವಡಿ ಮಾಡಿದರು.

ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದ ಅವರು ಸಚಿವ ತಂಗಡಗಿ ಹೇಳಿಕೆಯನ್ನು ಬಿಜೆಪಿ ತೀಕ್ಷ್ಣವಾಗಿ ಖಂಡಿಸುತ್ತದೆ. ಅವರಿಗೆ ತಾಕತ್ತಿದ್ದರೆ ಮೊದಲು ಕಾಂಗ್ರೆಸ್ ಸರಕಾರವನ್ನು ಸರಿದಾರಿಗೆ ತರಲಿ. ಸ್ವತಃ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದೂ ದಲಿತ, ಹಿಂದುಳಿದ ವರ್ಗದವರ ಕುರಿತ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ಧೋರಣೆಯನ್ನು ಸರಿಪಡಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರಕಾರ ತನ್ನ ಗ್ಯಾರಂಟಿ ಭಾಗ್ಯಗಳಿಗೆ ಹಣ ಹೊಂದಿಸಲು ದಲಿತ, ಹಿಂದುಳಿದ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಕಳೆದ ವರ್ಷ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೊಟಿ ರೂ ಹಾಗೂ ಈ ವರ್ಷ 14 ಸಾವಿರ ಕೋಟಿ ರೂ.ಗಳನ್ನು ಬಿಟ್ಟಿ ಭಾಗ್ಯಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ಆಮೂಲಕ ಹಿಂದುಳಿದ ವರ್ಗಗಳ ಬಗ್ಗೆ ತನಗೆಷ್ಟು ಕಾಳಜಿ ಇದೆ ಎಂಬುದನ್ನು ತಾನೇ ಬಹಿರಂಗಪಡಿಸಿದೆ ಎಂದವರು ಟೀಕಿಸಿದರು.
ನರೇಂದ್ರ ಮೋದಿಯವರ ಆಡಳಿತದಲ್ಲಿ ಯುವಕರು ತಮ್ಮದೇ ದೇಶದ ನೂರಾರು ತಂತ್ರಜ್ಞಾನ ಆಧಾರಿತ ಸ್ಟಾರ್ಟ್ಅಪ್ ಸಂಸ್ಥೆಗಳನ್ನು ಶುರುಮಾಡಿದ್ದಾರೆ, ಅದಕ್ಕಾಗಿಯೇ ಮೋದಿಗೆ ಮತ ನೀಡುತ್ತಾ ಬಂದಿದ್ದಾರೆ. 2022-23 ರಲ್ಲಿ 5.20 ಲಕ್ಷ ಯುವಕರು ಪದವಿ ಪಡೆದಿದ್ದಾರೆ. ಆದರೆ ಕಾಂಗ್ರೆಸ್ಸಿನ ಯುವನಿಧಿ ಯೋಜನೆಯಡಿಯಲ್ಲಿ ಕೇವಲ 3500 ಯುವಕರಿಗೆ ಹಣ ಸಿಕ್ಕಿದೆ. ಯುವಕರಿಗೆ ಸುಳ್ಳು ಹೇಳಿ ಮೋಸ ಮಾಡಿದ ಕಾಂಗ್ರೆಸ್ ರಾಜ್ಯದ ಯುವ ಜನತೆಯ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೊಟ್ಯಾಡಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಯುವಮೋರ್ಚಾ ಉಪಾಧ್ಯಕ್ಷ ಅಶ್ರಿತ್ ನೋಂಡ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ ಪೂಜಾರಿ, ಮಾಧ್ಯಮ ಸಹ ಸಂಚಾಲಕ ಮನೋಹರ್ ಶೆಟ್ಟಿ ಕದ್ರಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles