20.1 C
Karnataka
Friday, November 15, 2024

ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತ ಮುತ್ತ ನಿಷೇಧಾಜ್ಞೆ

ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೆರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮಾರ್ಚ್ 28 ರಿಂದ ಏಪ್ರಿಲ್ 8ರ ಸೋಮವಾರ ಬೆಳ್ಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.

ಮಾರ್ಚ್ 28ರಂದು ಅಧಿಸೂಚನೆ ಆರ೦ಭಬಾಗಿದ್ದು ಏಪ್ರಿಲ್ 4ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ, ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ, ಏಪ್ರಿಲ್ 6ರಂದು ನಾಮಪತ್ರ ಹಿಂಪಡೆಯುವ ದಿನವಾಗಿದೆ.
ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ನಿಷೇಧಿತ 100ಮೀಟರ್ ಪರಿಧಿಯಲ್ಲಿ ಅಭ್ಯರ್ಥಿಯ ವಾಹನವನ್ನು ಒಳಗೊಂಡಂತೆ, ಗರಿಷ್ಟ ಮೂರು ವಾಹನಗಳಿಗೆ ಮಾತ್ರ ಕಚೇರಿ ಆವರಣದಲ್ಲಿ ನಿಲುಗಡೆಗೆ ಅನುಮತಿ ನೀಡಲಾಗಿದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಪ್ರವೇಶಿಸಲು ಅಭ್ಯರ್ಥಿಯನ್ನು ಒಳಗೊಂಡಂತೆ ಗರಿಷ್ಠ ಐದು ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಐದು ಮಂದಿಗಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು, ಆಯುಧ ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿಬರ್ಂಧಿಸಲಾಗಿದೆ.

ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಚುನಾವಣೆ ನಡೆಯುವ ಕಾರ್ಯದ ಮೇಲೆ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣೆ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದೆ. ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ, ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸಬಾರದು, ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳಿಗೆ ವಿರೂಪವನ್ನುಂಟು ಮಾಡುವುದು ಅಥವಾ ನಷ್ಟಗೊಳಿಸುವುದು ಮಾಡಬಾರದು.

 ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಗಳ ತೇಜೊವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles