24.9 C
Karnataka
Friday, November 15, 2024

ಚುನಾವಣೆ ಕಾರ್ಯತಂತ್ರ: ಜಿಲ್ಲಾ ಬಿಜೆಪಿ ಪ್ರಮುಖರ ಮಹತ್ವದ ಸಭೆ

ಮಂಗಳೂರು: ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಈವರೆಗೆ ನಡೆದ ಚುನಾವಣಾ ಬೂತ್ ಕಾರ್ಯಗಳ ಬಗ್ಗೆ ವರದಿಯನ್ನು ಪಡೆದರು.

ಇನ್ನಷ್ಟು ಮತದಾರರನ್ನು ತಲುಪಲು ಕೈಗೊಳ್ಳಬೇಕಾಗಿರುವ ಕಾರ್ಯಚಟುವಟಿಕೆಗಳ ಬಗ್ಗೆ ಗಮನಹರಿಸಿ ಮತ್ತಷ್ಟು ವೇಗದಲ್ಲಿ ಕೆಲಸಗಳು ನಡೆಯುವಂತೆ ಪ್ರೇರೇಪಿಸಿದರು. ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಮಾತನಾಡಿ, ಏಪ್ರಿಲ್ 4ರಂದು ನಡೆಯಲಿರುವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಲೋಕಸಭಾ ಚುನಾವಣಾ ಸಂಚಾಲಕ ನಿತಿನ್ ಕುಮಾರ್, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲೆಯ ಶಾಸಕರುಗಳು, ವಿಧಾನಪರಿಷತ್ ಸದಸ್ಯರು, ಮಂಡಲಗಳ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರುಗಳು, ಪ್ರಕೋಷ್ಟಗಳ ಸಂಚಾಲಕರುಗಳು ಸೇರಿದಂತೆ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು. ದೇವದಾಸ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles