24 C
Karnataka
Friday, November 15, 2024

ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ

ಸುಳ್ಯ: ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಚುನಾವಣಾ ಕಚೇರಿ ಶನಿವಾರ ಸುಳ್ಯ ಹಳೆ ಬಸ್ ನಿಲ್ದಾಣ ಸಮೀಪದ ಹಿಂದೂಸ್ಥಾನ್ ಸಿಟಿ ಡೆವಲಪರ್ಸ್ ನಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ವತೋಮುಖ ಅಭಿವೃದ್ಧಿಯೆಡೆಗೆ ಕೊಂಡೊಯ್ದಿರುವುದು ಕಾಂಗ್ರೆಸ್ ಲೋಕಸಭಾ ಸದಸ್ಯರ ಸಾಧನೆ. ನಂತರ ಅಧಿಕಾರ ಹಿಡಿಯಲೋಸುಗ ಜನರನ್ನು ದಾರಿ ತಪ್ಪಿಸಿ, ಅಪಪ್ರಚಾರ ಮಾಡಿದ ಬಿಜೆಪಿ ಅಧಿಕಾರ ತೆಗೆದುಕೊಂಡಿತು. ಇದೇ ಕಾಯಕವನ್ನು ಮುಂದುವರಿಸಿಕೊಂಡು ಬಂದಿದ್ದು, ಅಧಿಕಾರ ಹಿಡಿದುಕೊಂಡಿದೆ. ಹಾಗಾಗಿ ದ.ಕ. ಬಿಜೆಪಿಯ ಭದ್ರಕೋಟೆ ಎಂದೇ ಭಾವಿಸಿಕೊಂಡಿದ್ದಾರೆ. ಇಂತಹ ಆಲೋಚನೆ ತಲೆಯಲ್ಲಿದ್ದರೆ ಮೊದಲು ತೆಗೆದುಹಾಕಿ. ಕಾಂಗ್ರೆಸ್ ಸಾಧನೆಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಿ ಎಂದರು.
ಕಾಂಗ್ರೆಸ್ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿ, ಯುವಕ, ಉತ್ಸಾಹಿ ಪದ್ಮರಾಜ್ ಅವರನ್ನು ಪಾರ್ಲಿಮೆಂಟಿಗೆ ಕಳುಹಿಸಿಕೊಡಬೇಕು. ಈ ಮೂಲಕ ನೆಮ್ಮದಿಯ, ಶಾಂತಿಯ ಜೀವನಕ್ಕೆ ಮುನ್ನುಡಿ ಹಾಡುವಂತೆ ಕೇಳಿಕೊಂಡರು.
ಜಿಲ್ಲಾ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಸಿದ್ದರಾಮಯ್ಯ ಅವರ ಹಿಂದಿನ ಮುಖ್ಯಮಂತ್ರಿ ಅವಧಿಯಲ್ಲಿ ಸುಳ್ಯದಲ್ಲಿ ಅನೇಕ ಸೇತುವೆಗಳು ನಿರ್ಮಾಣಗೊಂಡಿವೆ. ನಮ್ಮ ಪ್ರತಿನಿಧಿ ಇಲ್ಲದೇ ಹೋದರೂ ಸಾಕಷ್ಟು ಜನಪರ ಕೆಲಸ ನಡೆದಿವೆ ಎಂದರು.ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಈ ಚುನಾವಣೆಯನ್ನು ಗೆಲ್ಲುವ ಉತ್ಸಾಹದಲ್ಲಿ ಕಾರ್ಯಕರ್ತರಿದ್ದಾರೆ. ಇದಕ್ಕೆ ಪೂರಕವಾಗಿ ಉತ್ತಮ ಅಭ್ಯರ್ಥಿಯನ್ನು ಪಕ್ಷ ನೀಡಿದೆ. ಇನ್ನು ಮತ ಕೇಳಲು ಜನರ ಬಳಿಗೆ ಹೋಗುವಾಗ ಅಧೈರ್ಯವೂ ಬೇಡ. ಕಾರಣ, ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆ. ಹಾಗಾಗಿ ಈ ಲೋಕಸಭಾ ಚುನಾವಣೆಯನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಐಸಿಸಿ ಸದಸ್ಯ ಐವನ್ ಡಿಸೋಜಾ ,ಕಾಂಗ್ರೆಸ್ ಮುಖಂಡ ಧನಂಜಯ ಅಡ್ಪಂಗಾಯ ಮಾತನಾಡಿದರು.ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಜಿ.ಪಂ. ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಸರಸ್ವತಿ ಕಾಮತ್, ಪ್ರಚಾರ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಇಸಾಕ್ ಸಾಹೇಬ್, ಕಿರಣ್ ಬುಡ್ಲೆಗುತ್ತು, ಡಾ. ರಘು, ಇಸಾಕ್ ಮೊದಲಾದವರು ಉಪಸ್ಥಿತರಿದ್ದರು.
ಪಿ.ಸಿ. ಜಯರಾಂ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಅಶೋಕ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles