16.7 C
Karnataka
Saturday, November 23, 2024

ಎಸ್‌ಸಿಡಿಸಿಸಿ ಬ್ಯಾಂಕ್ : 79.09 ಕೋಟಿ ರೂ. ಸಾರ್ವಕಾಲಿಕ ದಾಖಲೆಯ ಲಾಭ

ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ದಿನಾಂಕ 31-03-2024ಕ್ಕೆ ಅಂತ್ಯವಾದ ಆರ್ಥಿಕ
ವರ್ಷದಲ್ಲಿ ರೂ.79.09 ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ.61.29 ಕೋಟಿ) ಕ್ಕಿಂತ ಶೇ. 29.04 ಏರಿಕೆಯಾಗಿದ್ದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎ೦ದು
ಬ್ಯಾಂಕಿನ ಅಧ್ಯಕ್ಷರಾದ ಡಾ ಎಂ.ಎನ್.ರಾಜೇಂದ್ರಕುಮಾರ್ ತಿಳಿಸಿದ್ದಾರೆ.
ಬ್ಯಾಂಕಿನ ಕೇ೦ದ್ರ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ಸಿಡಿಸಿಸಿ ಬ್ಯಾಂಕ್‌ ಅಭಿವೃದ್ಧಿಯ ಮುಂಚೂಣಿಯಲ್ಲಿದ್ದು, ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನ 110 ವರ್ಷಗಳ ಸಾರ್ಥಕ ಸೇವೆಯೊ೦ದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 113 ಶಾಖೆಗಳ ಮೂಲಕ ಉತ್ಕೃಷ್ಠ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದೆ. ವರದಿ ವರ್ಷದಲ್ಲಿ ರೂ.15540.80 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ (ರೂ.13514.51 ಕೋಟಿ) ಈ ಬಾರಿ ಶೇ.14.99ಏರಿಕೆಯನ್ನು ಕಂಡಿದೆ. 2024-25ನೇ ಸಾಲಿಗೆ ರೂ.18,000 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ ಎ೦ದರು.

ರೂ.7221.37 ಕೋಟಿ ಠೇವಣಿ

ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು ರೂ.7221.37 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ 13.33 ಏರಿಕೆಯಾಗಿದೆ. ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ರೂ.6485.12 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿಸಾಲವಾಗಿ ರೂ.2032.28 ಕೋಟಿ ರೂಪಾಯಿ, ಮಧ್ಯಮಾವಧಿ ಸಾಲ ರೂ.136.99 ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.2169.27 ಕೋಟಿ ರೂಪಾಯಿ ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ ರೂ.4315.85 ಕೋಟಿ ಸಾಲ ನೀಡಲಾಗಿದೆ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ರೂ.8319.43 ಕೋಟಿಯಾಗಿರುತ್ತದೆ ಎ೦ದವರು ವಿವರಿಸಿದರು.

ಸತತ 29 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ 100ರ ಸಾಧನೆ

ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 29 ವರ್ಷಗಳಿಂದ ಬ್ಯಾಂಕ್ ಸತತವಾಗಿ ಮಾಡಿರುವುದು ರಾಷ್ಟ್ರೀಯ
ದಾಖಲೆಯಾಗಿದೆ. ಬ್ಯಾಂಕ್‌ಗೆ ಒಟ್ಟು 1072 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.403.59 ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ.11379.23 ಕೋಟಿ ಆಗಿದ್ದು, ಇದು ಕಳೆದ
ವರ್ಷಕ್ಕಿಂತ (ರೂ.9930.69 ಕೋಟಿ) ಶೇಕಡ 14.59% ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.261.00 ಕೋಟಿ ವಿವಿಧ ನಿಧಿಗಳನ್ನುಹೊಂದಿರುತ್ತದೆ. ಶೇಕಡ 8.38% ರಷ್ಟು ಏರಿಕೆ ಕಂಡಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ ಕಿಸಾನ್ ಕಾರ್ಡ್‌ನ್ನು
ನೀಡಿದೆ. ಈಗಾಗಲೇ 1,37,010 ರುಪೇ ಕಿಸಾನ್ ಕಾರ್ಡ್‌ಗಳನ್ನು ರೈತರಿಗೆ ವಿತರಿಸಲಾಗಿದೆ. 80,668 ರುಪೇ ಡೆಬಿಟ್ ಕಾರ್ಡ್‌ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ.
ಬ್ಯಾಂಕಿನ ಸಾಧನೆ
ಬ್ಯಾಂಕಿಗೆ 21 ಬಾರಿ ಅಪೆಕ್ಸ್‌ ಬ್ಯಾಂಕ್ ಪ್ರಶಸ್ತಿ, 19 ಬಾರಿ ನಬಾರ್ಡ್ ಪ್ರಶಸ್ತಿ . ಎರಡು ಬಾರಿ ‘‘ಎಫ್‌ಸಿಬಿಎ’’ ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್
ಪುರಸ್ಕೃತಗೊಂಡಿದೆ.ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಎರಡು ಬಾರಿ ಪ್ರತಿಷ್ಠಿತ ‘‘ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ’’ ಲಭಿಸಿದೆ. ಕೇಂದ್ರ ಸರಕಾರದ ಮಹತ್ತರ ಯೋಜನೆಯಾದ ‘‘ಅಟಲ್
ಪಿಂಚಣಿ ಯೋಜನೆ’’ಯನ್ನು ಬ್ಯಾಂಕ್ ಸಮರ್ಪಕವಾಗಿ ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ನೋಂದಾಯಿಸಿ ವರದಿ ವರ್ಷದಲ್ಲಿ 2 ಬಾರಿ
ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ಪ್ರಶಸ್ತಿಗೆ ಪಾತ್ರವಾಗಿದೆ ಎ೦ದವರು ತಿಳಿಸಿದರು.
ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‌ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.. ಬ್ಯಾಂಕ್ ಒಟ್ಟು 34,474 ಗುಂಪುಗಳನ್ನು ಹೊಂದಿದೆ. ಉಭಯ ಜಿಲ್ಲೆಗಳ ಎಲ್ಲಾ
ನವೋದಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯೆಯರಿಗೆ ಸಮವಸ್ತ್ರ ವಿತರಣೆಯನ್ನು ಮಾಡಲಾಗಿದೆ.ಜಿಲ್ಲೆಯಲ್ಲಿ ಒಟ್ಟು 156063 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್
ಕಾರ್ಡ್ ಸಾಲ ವಿತರಿಸಲಾಗಿದೆ. 89138 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.ಬ್ಯಾಂಕಿನ ಎಲ್ಲಾ ಶಾಖೆಗಳು ಸಂಪೂರ್ಣ ಗಣಕೀಕೃತಗೊಂಡು
ಏಕಗವಾಕ್ಷಿ, ಆರ್.ಟಿ.ಜಿ.ಎಸ್/ ನೆಫ್ಟ್‌ ಹಾಗೂ ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕಿನ 19 ಶಾಖೆಗಳು ಸಂಪೂರ್ಣ ಹವಾನಿಯಂತ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ.
ಟ್ಯಾಬ್ ಬ್ಯಾಂಕಿಂಗ್: ಬ್ಯಾಂಕ್ ವ್ಯವಹಾರವನ್ನು ಸರಳೀಕರಿಸುವ ನಿಟ್ಟಿನಲ್ಲಿ ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗ್ರಾಹಕರಿಗೆ ಬ್ಯಾಂಕ್ ಪರಿಚಯಿಸಿದೆ. ಮನೆ ಅಥವಾ ಕಛೇರಿಗಳಲ್ಲಿ ಕುಳಿತು ಮೊಬೈಲ್ ಸಂಪರ್ಕವಿರುವ ಬ್ಯಾಂಕಿನ ಟ್ಯಾಬ್ಲೆಟ್ ಬಳಸಿ ತಮ್ಮ ಬ್ಯಾಂಕ್ ಖಾತೆಯನ್ನು ತೆರೆಯುವ ಹಾಗೂ ನಿರ್ವಹಿಸುವ ನೂತನ ವ್ಯವಸ್ಥೆ ಇದಾಗಿದೆ. ಇದರಿಂದ ಗ್ರಾಹಕರು ಪ್ರತಿ ಬಾರಿಶಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ.
ಮೊಬೈಲ್ ಆ್ಯಪ್ : ಈ ಯೋಜನೆಯ ಮುಖಾಂತರ ಗ್ರಾಹಕರ ಮೊಬೈಲ್ ಮೂಲಕ ಬ್ಯಾಂಕಿನ ಶಾಖೆಗಳ ನಡುವೆ ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾಯಿಸಬಹುದು. ಅಲ್ಲದೆ ಮೊಬೈಲ್ ಮುಖಾಂತರವೇ ಗ್ರಾಹಕರ ಖಾತೆಯ
ವ್ಯವಹಾರದ ವಿಚಾರಣೆ, ಮಿನಿಸ್ಟೇಟ್‌ಮೆಂಟ್ ಹಾಗೂ ಪಾಸ್‌ಬುಕ್ ನಿರ್ವಹಣೆಯ ಸೌಲಭ್ಯ ಪಡೆಯಬಹುದಾಗಿದೆ. ಎ.ಟಿ.ಎಂ. ಅಳವಡಿಕೆ: ಬ್ಯಾಂಕಿನ ಮುಖ್ಯ ಶಾಖೆಗಳಲ್ಲಿ ಎಟಿಎಂ ಅಳವಡಿಸಲಾಗಿದ್ದು, ಈಗಾಗಲೇ ಉಭಯ ಜಿಲ್ಲೆಗಳ 14
ಶಾಖೆಗಳಲ್ಲಿ ಎ.ಟಿ.ಎಂ. ಅಳವಡಿಸಲಾಗಿದೆ.
ಮುಂದಿನ ಯೋಜನೆಗಳು
ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆಯನ್ನುಕಾರ್ಯಗತಗೊಳಿಸಲು ಚಿಂತನೆ ನಡೆಸಿದೆ. ಈ ಯೋಜನೆಯಿಂದ ಗ್ರಾಹಕರು ಮೊಬೈಲ್ ಮುಖಾಂತರ ತಮ್ಮ ಖಾತೆಯಿಂದ
ಇತರ ಬ್ಯಾಂಕಿನ ಖಾತೆಗೆ ಹಣ ವರ್ಗಾಯಿಸಬಹುದು.ಇಂಟರ್‌ನೆಟ್ ಬ್ಯಾಂಕಿಂಗ್ ಸೇವೆ ಶೀಘ್ರದಲ್ಲಿ ಆರಂಭಗೊಳ್ಳಲಿದೆ. ಭಾರತ್ ಬಿಲ್ ಪೇಮೆಂಟ್ ಸಿಸ್ಟಮ್ ಯೋಜನೆ
ಜನೋಪಯೋಗಿ ಯೋಜನೆಯಾಗಿದೆ. ಇದರಿಂದ ವಿದ್ಯುತ್ ಬಿಲ್, ನೀರಿನ ಬಿಲ್, ಡಿ.ಟಿ.ಎಚ್. ರಿಚಾರ್ಜ್ ಇತ್ಯಾದಿ ಪಾವತಿಗಳನ್ನು ಬ್ಯಾಂಕಿನ
ಶಾಖೆಗಳಲ್ಲಿ ನಿರ್ವಹಿಸುವ ಯೋಜನೆ ಇದಾಗಿದೆ.10 ಹೊಸ ಶಾಖೆಗಳು: ಬ್ಯಾಂಕ್ ಮುಂದಿನ ಅವಧಿಯಲ್ಲಿ 10 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನುಹಮ್ಮಿಕೊಂಡಿದೆ ಎ೦ದವರು ವಿವರಿಸಿದರು.
ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ . ನಿರ್ದೇಶಕರಾದ ಟಿ.ಜಿ.ರಾಜರಾಮ ಭಟ್ , ಭಾಸ್ಕರ್ ಎಸ್ ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ , ಎಸ್.‌ರಾಜು ಪೂಜಾರಿ ‌, ಶಶಿಕುಮಾರ್ ರೈ ಬಾಲ್ಯೋಟ್ಟು, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು.ಕೆ.ಹರಿಶ್ಚಂದ್ರ , ಎಂ.ಮಹೇಶ್ ಹೆಗ್ಡೆ , ಬಿ ಅಶೋಕ್ ಕುಮಾರ್ ಶೆಟ್ಟಿ,ಸದಾಶಿವ ಉಳ್ಳಾಲ್‌, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ ರೈ ರಾಜೇಶ್ ರಾವ್ , ಎಸ್‌ . ಎನ್‌ . ಮನ್ಮಥ, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್‌ ಎಚ್,ಎನ್‌., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles