26.5 C
Karnataka
Saturday, November 23, 2024

ಆಕಾಂಕ್ಷ‌ ರಂಜನ್ ಚುನಾವಣಾ ಸಾಮಾನ್ಯ ವೀಕ್ಷಕರು

ಮಂಗಳೂರು:- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಕು. ಆಕಾಂಕ್ಷ ರಂಜನ್ ಅವರನ್ನು
ನಿಯೋಜನೆ ಮಾಡಿದ್ದು ಏ.3ರಂದು ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣಾ ಸಾಮಾನ್ಯ ವೀಕ್ಷಕರು ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರು ಅಥವಾ ಅಹವಾಲುಗಳು ಇದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಬಹುದಾಗಿದೆ.
ಅವರ ಸಂಪರ್ಕ ವಿವರ ಇಂತಿದೆ: ಅವರ ಮೊಬೈಲ್ ಸಂಖ್ಯೆ- 9482698817. ಸ್ಥಿರ ದೂರವಾಣಿ- 0824-2001594. ಇಮೇಲ್ ವಿಳಾಸ: generalobserverdk17@gmail.com ಆಗಿದ್ದು ಚುನಾವಣಾ ಸಾಮಾನ್ಯ ವೀಕ್ಷಕರು ಕೇಂದ್ರ ಸ್ಥಾನದಲ್ಲಿ ಇರುವ ಸಂದರ್ಭದಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ‌.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂಸಿಎಂಸಿ ಸಮಿತಿಗೆ ಭೇಟಿ:
ಸಾಮಾನ್ಯ ವೀಕ್ಷಕರಾದ ಕು. ಆಕಾಂಕ್ಷ ರಂಜನ್ ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿಗೆ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ, ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles