22 C
Karnataka
Friday, November 15, 2024

85 ವರ್ಷ ಮೇಲ್ಪಟ್ಟ, ವಿಕಲಚೇತನ ಮತದಾರರ ಮತದಾನ: ಜಿಲ್ಲೆಯಲ್ಲಿ ಈವರೆಗೆ 6,658 ಮಂದಿಯಿಂದ ಹಕ್ಕು ಚಲಾವಣೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ಶೇ. 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯ ಹೊಂದಿರುವ ವಿಶೇಷ ಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ಒಟ್ಟು 8,010 ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿರುತ್ತಾರೆ. ಈ ಪೈಕಿ 5,011 ಹಿರಿಯ ನಾಗರಿಕರು ಹಾಗೂ 1,647 ವಿಶೇಷ ಚೇತನರು ಸೇರಿ ಒಟ್ಟು 6,658 ಮತದಾರರು ಈ ದಿನದವರೆಗೆ ಮತ ಚಲಾಯಿಸಿರುತ್ತಾರೆ.

ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಮನೆಯಲ್ಲಿಯೇ ಮತದಾನ ಮಾಡುವ ಪ್ರಕ್ರಿಯೆಯನ್ನು ಆಯ್ಕೆ ಮಾಡಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರು ಮತಗಟ್ಟೆಗೆ ತೆರಳಿ ಮತ ಚಲಾಯಿಸುವುದರ ಬದಲಿಗೆ ಮನೆಯಲ್ಲಿಯೇ ತಮಗೆ ಮತದಾನದ ಅವಕಾಶವನ್ನು ನೀಡಿದ್ದಕ್ಕಾಗಿ ತಮ್ಮ ಸಂತಸವನ್ನು ಹಂಚಿಕೊಂಡಿರುತ್ತಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ‌ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಆನಂದ್ ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles