ಅಳದಂಗಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂದು ಕರೆ ನೀಡಿದ ನಾರಾಯಣಗುರುಗಳು, ಇದನ್ನ ಬಿಲ್ಲವ ಸಮುದಾಯಕ್ಕಷ್ಟೇ ಹೇಳಿಲ್ಲ. ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳನ್ನು ಉದ್ದೇಶಿಸಿ ಹೇಳಿದ್ದರು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದರು.ನಾರಾವಿಯಿಂದ ಅಳದಂಗಡಿವರೆಗೆ ಕಾಂಗ್ರೆಸ್ ರೋಡ್ ಶೋ ಬಳಿಕ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ತಾನು ರಾಜಕೀಯಕ್ಕೆ ಬರ್ತೇನೆ, ಲೋಕಸಭಾ ಸದಸ್ಯ ಚುನಾವಣೆಗೆ ಟಿಕೇಟ್ ಪಡೆದುಕೊಳ್ಳುತ್ತೇನೆ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ತುಳು ನಾಡಿನ ದೈವ – ದೇವರುಗಳ ಆಶೀರ್ವಾದದಿಂದ ನಾವು ಇಂದು ಈ ಮಟ್ಟಕ್ಕೆ ಏರಿದ್ದೇವೆ ಎಂದ ಅವರು, ಉಳಿದ ಹಬ್ಬಗಳಂತೆ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಬೇಕು ಎ೦ದರು.
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಇವತ್ತು ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ಆಗಬೇಕಾಗಿದೆ. ಅಭಿವೃದ್ಧಿಯ ಮೌಲ್ಯಮಾಪನದ ಅಗತ್ಯವಿದೆ.ಸ್ವಾಭಿಮಾನದ ಬದುಕು ನೀಡಿದ್ದು ಕಾಂಗ್ರೆಸ್. ನಿಮಗೆ ಅಹಿಂಸೆ ಬೇಕಿದ್ದರೆ ಕಾಂಗ್ರೆಸನ್ನು ಆಯ್ಕೆ ಮಾಡಿ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ಬೆಳ್ತಂಗಡಿ ತಾಲೂಕಿನಲ್ಲಿ ಗ್ಯಾರೆಂಟಿ ಅಲೆ ಇದೆ, ಪದ್ಮರಾಜ್ ಅಲೆ ಇದೆ. ಜಿಲ್ಲೆಯಲ್ಲಿ ಜನಾರ್ದನ ಪೂಜಾರಿ ಅವರ ಶಿಷ್ಯ ಪದ್ಮರಾಜ್ ಅವರನ್ನು ಗೆಲ್ಲಿಸಿಕೊಡಬೇಕು ಎಂದರು.
ಮಾಜಿ ಸಚಿವ ಗಂಗಾಧರ ಗೌಡ ,.ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಪ್ರಮುಖರಾದ ರಂಜನ್ ಗೌಡ, ನಾಗೇಶ್ ಗೌಡ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಪ್ರತಿಭಾ ಕುಳಾಯಿ, ಶ್ಯಾಲೆಟ್ ಪಿಂಟೋ, ಶಕುಂತಳಾ ಗಟ್ಟಿ, ಧರ್ಣೇಂದ್ರ ಕುಮಾರ್, ವಂದನಾ ಭಂಡಾರಿ, ಲಕ್ಷ್ಮೀಶ್ ಗಬ್ಬಲಡ್ಕ ಮೊದಲಾದವರು ಉಪಸ್ಥಿತರಿದ್ದರು.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಸ್ವಾಗತಿಸಿದರು. ಶೇಖರ್ ಕುಕ್ಕೆಟ್ಟಿ ವಂದಿಸಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾ, ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ, ಅಳದಂಗಡಿ ಶ್ರೀ ಸತ್ಯದೇವತೆ ಸಾನಿಧ್ಯ, ನಾರಾವಿ ದಿಗಂಬರ ಜಿನ ಚೈತ್ಯಾಲಯ ಧರ್ಮನಾಥ ಸ್ವಾಮಿ ಬಸದಿ, ನಾರಾವಿ ಸಂತ ಅಂಥೋನಿ ಚರ್ಚ್ ಗೆ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು.