ಮಂಗಳೂರು: ಮಂಗಳೂರು ದಕ್ಷಿಣ ವಿಭಾಗದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಅವರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಸ್ಟೇಟ್ಬ್ಯಾಂಕ್ ವ್ಯಾಪ್ತಿಯಲ್ಲಿ ಶುಕ್ರವಾರ ನಡೆಯಿತು.
ಸುಮಾರು 100ಕ್ಕೂ ಅಧಿಕ ಕಾರ್ಯಕರ್ತರು ಕೇಸರಿ ಪೇಟಾ ಧರಿಸಿ ಎ.ಬಿ.ಶೆಟ್ಟಿ ಸರ್ಕಲ್ನಿಂದ, ಹ್ಯಾಮಿಲ್ಟನ್ ವೃತ್ತ, ರಾವ್ ಆ್ಯಂಡ್ ವೃತ್ತ ಹಾಗೂ ಕೆ.ಎಸ್.ರಾವ್ ರಸ್ತೆ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದರು.
ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮಂಗಳೂರು ನಗರ ಅಭಿವೃದ್ದಿಯ ಮಹಾಪರ್ವವನ್ನೇ ಕಂಡಿದೆ. ಮುಂದಿನ ಅವಧಿಗೂ ಅವರೇ ನಮ್ಮ ಪ್ರಧಾನಿಯಾಗುವಲ್ಲಿ ಸರ್ವರ ಸಹಕಾರ ಅಗತ್ಯ ಎಂದರು.
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಬ್ರಿಜೇಶ್ ಚೌಟ, ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ದಕ್ಷಿಣ ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಬಿಜೆಪಿ ಪ್ರಮುಖರಾದ ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ರಮೇಶ್ ಕಂಡೆಟ್ಟು, ಮಹೇಶ್ ಜೋಗಿ ಮುಂತಾದವರು ಉಪಸ್ಥಿತರಿದ್ದರು.