17.5 C
Karnataka
Friday, November 22, 2024

ಲೋಕಸಭಾ ಚುನಾವಣೆ : ಮತದಾನಕ್ಕೆ ಸಕಲ ಸಿದ್ದತೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26ರ೦ದು ನಡೆಯುವ ಚುನಾವಣಾ ಮತದಾನಕ್ಕೆ ಸಕಲ ಸಿದ್ದತೆ ಮಾಡಲಾಗಿದೆ.ಬೆಳಿಗ್ಗೆ 7 ಸಂಜೆ 6 ರವರೆಗೆ ಮತದಾನ ನಡೆಯಲಿದೆ.,
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜಿನಲ್ಲಿ, ಮೂಡುಬಿದರೆಗೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ, ಮಂಗಳೂರು ನಗರ ಉತ್ತರಕ್ಕೆ ಸೇಂಟ್ ಅಲೋಷಿಯಸ್ ಪಿಯು ಕಾಲೇಜು ಕಟ್ಟಡ, ಮಂಗಳೂರು ದಕ್ಷಿಣಕ್ಕೆ ಊರ್ವಾ ಲಾಲ್ ಭಾಗ್ ನ ಕೆನರಾ ಹೈಸ್ಕೂಲ್ ಹಾಗೂ ಹೈಯರ್ ಪ್ರೈಮರಿ ಸ್ಕೂಲ್, ಮಂಗಳೂರಿಗೆ ಸಂಬಂಧಿಸಿದಂತೆ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದ ಮಾನವೀಯ ಅಧ್ಯಯನ ಶಾಸ್ತ್ರದ ವಿಭಾಗದಲ್ಲಿ, ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಡ೦ಕಾಪುನಲ್ಲಿರುವ ಇನ್ ಫೆ೦ಟ್ ಜೀಸಸ್ ಇಂಗ್ಲಿಷ್ ಮತ್ತು ಕನ್ನಡ ಮೀಡಿಯಂ ಶಾಲೆಯಲ್ಲಿ,‌ ಪುತ್ತೂರಿಗೆ ಸಂಬಂಧಿಸಿದಂತೆ ತೆಂಕಿಲದಲ್ಲಿರುವ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಹಾಗೂ ಸುಳ್ಯಗೆ ಸಂಬಂಧಿಸಿದಂತೆ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಮಾಸ್ಟರಿಂಗ್ ಕೇಂದ್ರಗಳಿ೦ದ ಚುನಾವಣೆಗೆ ನಿಯೋಜಿತಗೊ೦ಡಿರುವ ಸಿಬ್ಬ೦ದಿ ಭದ್ರತಾ ಸಿಬ್ಬ೦ದಿ ಜತೆ ಚುನಾವಣಾ ಸಾಮಾಗ್ರಿಗಳೊ೦ದಿಗೆ ನಿಗದಿತ ಮತಗಟ್ಟೆಗಳಿಗೆ ಗುರುವಾರ ತೆರಳಿದರು.

ಜಿಲ್ಲೆಯಾದ್ಯಂತ 1,876 ಮತಗಟ್ಟೆಗಳಿದ್ದು, 524 ಸರ್ವಿಸ್ ವೋಟರ್ ಗಳು ಸೇರಿದಂತೆ ಒಟ್ಟು 18,18,127 ಮಂದಿ ಮತದಾರರಿದ್ದಾರೆ. ಮತಗಟ್ಟೆಗಳಲ್ಲಿ ಮತದಾರರ ಸಹಾಯ ಕೇಂದ್ರ ಸೌಲಭ್ಯಕ್ಕಾಗಿ ಪ್ರತಿ ಮತಗಟ್ಟೆಗಳಲ್ಲಿ ಮತದಾರರ ಕ್ರಮ ಸಂಖ್ಯೆ ಮತ್ತು ಮತಗಟ್ಟೆಗಳನ್ನು ಗುರುತಿಸಲು ಸಹಾಯವಾಗುವಂತೆ ಬಿ ಎಲ್ ಓ ಅವರನ್ನು ಒಳಗೊಂಡ ಮತದಾರರ ಸಹಾಯ ಕೇಂದ್ರ ತೆರೆಯಲಾಗಿದೆ. ಜಿಲ್ಲೆಯ ಎಲ್ಲಾ 1,876 ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. 2,251 ಪ್ರಿಸೈಡಿಂಗ್ ಅಧಿಕಾರಿಗಳು, 2,251 ಎಪಿಆರ್‌ಓಗಳು, 4,502 ಪಿಓಗಳು, 2,251 ಗ್ರೂಪ್ ಡಿ ನೌಕರರು ಸೇರಿದಂತೆ ಒಟ್ಟಾರೆ 11,255 ಅಧಿಕಾರಿ, ಸಿಬ್ಬಂದಿಗಳು ಈ ಚುನಾವಣೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ .

ವೋಟರ್ ಸ್ಲಿಪ್ ಅನ್ನು ವಿತರಿಸಲಾಗಿದೆ, ಅದರೊಂದಿಗೆ ಮತದಾರರು ಮತದಾನ ಮಾಡಲು ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು ಮತದಾರರು ಎಪಿಕ್ ಕಾರ್ಡ್ ತೋರಿಸಿ ಮತದಾನ ಮಾಡಬಹುದು ಹಾಗೂ ಎಪಿಕ್ ಕಾರ್ಡ್ ಹೊರತುಪಡಿಸಿ ಕೇಂದ್ರ ಚುನಾವಣಾ ಆಯೋಗವು ನಿಗದಿಪಡಿಸಿರುವ ಆಧಾರ್ ಕಾರ್ಡ್, ಎಂಜಿ ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯ ಪಾಸ್ ಬುಕ್, ಅಂಚೆ ವಿಮೆ, ಚಾಲನ ಪರವಾನಿಗೆ, ಪಾನ್ ಕಾರ್ಡ್, ಆರ್ ಜಿ ಐ ನೀಡಿರುವ ಸ್ಮಾರ್ಟ್ ಕಾರ್ಡ್, ಪಾಸ್ಪೋರ್ಟ್, ಪಿಂಚಣಿ ದಾಖಲಾತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದ ಸೇವಾ ಗುರುತಿನ ಚೀಟಿ, ಎಂಪಿ, ಎಂ ಎಲ್ ಎ, ಎಂಎಲ್ಸಿ ಅವರಿಗೆ ವಿತರಿಸಲಾಗಿರುವ ಅಧಿಕೃತ ಗುರುತಿನ ಚೀಟಿಗಳು, ಯುನಿಕ್ ಡಿಸಬೆಲಿಟಿ ಐಡಿ ಕಾರ್ಡ್ ತೋರಿಸಿ ಮತ ಚಲಾಯಿಸಬಹುದಾಗಿದೆ. ಇದೇ ಮೊದಲ ಬಾರಿಗೆ ಬಳಸಿ ಮಂಗಳೂರು ನಗರ ಉತ್ತರ ಹಾಗೂ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಮತದಾರರು ಮತದಾನ ಕೇಂದ್ರದ ಮಾಹಿತಿಯನ್ನು ಪಡೆಯಬಹುದಾಗಿದೆ ವೋಟರ್ ಗೈಡ್ ಮತ್ತು ಮೊದಲನೇ ಬಾರಿಗೆ ಮತದಾನ ಮಾಡುವ ಯುವ ಮತದಾರರಿಗೆ ಚುನಾವಣಾ ಅಧಿಕಾರಿಗಳಿಂದ ಪರ್ನನಲೈಸ್ಡ್ ಲೆಟರ್ ಗಳನ್ನು ಸಹ ನೀಡಲಾಗುತ್ತದೆ,
ಪ್ರತಿ ವಿಧಾನಸಭಾ ಕ್ಷೇತ್ರವಾರು ಮತಗಟ್ಟೆಯಲ್ಲಿ ಮತದಾನ ಕಾರ್ಯ ಪೂರ್ಣಗೊಂಡು ಡಿ ಮಾಸ್ಟರಿಂಗ್ ಕಾರ್ಯ ಪೂರ್ಣಗೊಂಡ ನಂತರ ಡಿ ಮಾಸ್ಟರಿಂಗ್ ಕೇಂದ್ರಗಳಿಂದ ಇವಿಎಂ, ವಿವಿಪ್ಯಾಟ್ ಮತ್ತು ದಾಖಲೆಗಳನ್ನು ಮತ ಎಣಿಕೆ ಕೇಂದ್ರವಾದ ಸುರತ್ಕಲ್ ನ ಎನ್ಐಟಿಕೆಗೆ ತ೦ದು ದಾಸ್ತಾನಿ ಇರಿಸಲಾಗುವುದು

ಜಿಲ್ಲಾ ಚುನಾವಣಾಧಿಕಾರಿಗಳಿ೦ದ ಪರಿಶೀಲನೆ

ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಏಪ್ರಿಲ್ 25ರ೦ದು ಬೆಳ್ತಂಗಡಿಯ ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಕೆಂಪೇಗೌಡ ಹಾಗೂ ಚುನಾವಣಾ ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles