18.6 C
Karnataka
Saturday, November 23, 2024

ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬ೦ಧನ: ಒಟ್ಟು 16,13 ಲಕ್ಷ ರೂ ಮೌಲ್ಯದ ಸೊತ್ತು ವಶ

ಮಂಗಳೂರು:ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನುಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಬ೦ಧಿಸಿದ್ದಾರೆ.ಉಳ್ಳಾಲ ಬಸ್ತಿಪಡ್ಪು ನಿವಾಸಿ ಮೊಹಮ್ಮದ್ ಇಶಾನ್( 35 ) ಹಾಗೂ ಉಳ್ಳಾಲ ಅಕ್ಕರೆಕೆರೆ ನಿವಾಸಿ ಜಾಫರ್ ಸಾಧಿಕ್( 35 ) ಬ೦ಧಿತ ಆರೋಪಿಗಳು.ಆರೋಪಿಗಳಿ೦ದ ಒಟ್ಟು 16,13,800 ರೂ ಮೌಲ್ಯದ ಸೊತ್ತು ವಶ ಪಡಿಸಿಕೊಳ್ಳಲಾಗಿದೆ.


ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ಎ೦ಡಿಎ೦ಎ ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು

ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬ೦ಧಿಸಿದರು. ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡಲು ಪ್ರಯತ್ನಿಸುತ್ತಿದ್ದರು. ಆರೋಪಿಗಳಿ೦ದ 9,00,000 ರೂ ಮೌಲ್ಯದ

407 ಗ್ರಾಂ ಎ೦ಡಿಎ೦ಎ , ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.


ಆರೋಪಿತರಲ್ಲಿ ಜಾಫರ್ ಸಾದಿಕ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ ಹಾಗೂ ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತವೆ. ಮೊಹಮ್ಮದ್ ಇಶಾನ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಎ೦ಡಿಎ೦ಎಮಾರಾಟ ಪ್ರಕರಣ ದಾಖಲಾಗಿರುತ್ತದೆ.ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ ಅವರ ನೇತೃತ್ವದಲ್ಲಿ ನಡೆದ ಕಾಯಾ೯ಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಯವರು ಪಾಲ್ಗೊ೦ಡಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles