18.6 C
Karnataka
Saturday, November 23, 2024

ಮೇ 5 ರಿಂದ ಮಂಗಳೂರು ನಗರದಲ್ಲಿ ಕುಡಿಯುವ ನೀರಿನ ರೇಷನಿಂಗ್

ಮಂಗಳೂರು: ಮ೦ಗಳೂರು ನಗರಕ್ಕೆ ಕುಡಿಯುವ ನೀರಿನ ಮೂಲವಾಗಿರುವ ತುಂಬೆ ವೆ೦ಟೆಡ್‌ ಡ್ಯಾ೦ನಲ್ಲಿ ನೀರಿನ ಮಟ್ಟ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದು, ಮೇ 5 ರಿಂದ ಮಂಗಳೂರು ನಗರದಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ಉತ್ತರ) ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು ಸರಬರಾಜುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅದರಂತೆ ನಗರಕ್ಕೆ ದಿನ ಬಿಟ್ಟು ದಿನ ನೀರು ಪೂರೈಕೆಯಾಗಲಿದೆ.
ನಗರದ ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನೀರಿನ ರೇಷನಿಂಗ್ ಮಾಡಲು ಸೂಕ್ತ ವೇಳಾಪಟ್ಟಿಯನ್ನು ತಯಾರಿಸಿ ಸಮರ್ಪಕವಾಗಿ ಎಲ್ಲಾ ಕಡೆ ನೀರು ಪೂರೈಕೆಯಾಗುವಂತೆ ನಿಗಾವಹಿಸಬೇಕು ಎಂದು ಮಹಾನಗರಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.
ಮಳೆಯ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ನೀರಿನ ಸಮಸ್ಯೆ ಪ್ರಾರಂಭವಾಗುತ್ತಿದೆ. ಸಾರ್ವಜನಿಕರು ಅನಗತ್ಯವಾಗಿ ನೀರು ಪೊಲು ಮಾಡದೇ ಸದ್ಭಳಕೆ ಮಾಡಬೇಕು ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ನೀರನ್ನು ಅನಗತ್ಯವಾಗಿ ಪೊಲು ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು .ಈಗಾಗಲೇ ನೀರಿನ ಸಮಸ್ಯೆ ಪರಿಹರಿಸುವ ಕಂಟ್ರೋಲ್ ರೂಮ್ ಗಳನ್ನು ತೆರೆಯಲಾಗಿದ್ದು, ಈ ಕಂಟ್ರೋಲ್ ರೂಮ್ ಗಳಿಗೆ ಸಾರ್ವಜನಿಕರಿಂದ ಬರುವಂತಹ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles