ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೇ. 5 ರಂದು 18 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ (NEET ) ಪರೀಕ್ಷೆಗಳು ನಡೆಯಲಿದೆ.
ಈ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಯನ್ನು ಸುಸೂತ್ರವಾಗಿ ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆಗಿರುವ ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಅವರು ಆದೇಶಿಸಿದ್ದಾರೆ.
