ಮಂಗಳೂರು: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲ್ಕಿ ತಾಲೂಕಿನ, ಕಮ್ಮಾಜೆ, ಮೆನ್ನಬೆಟ್ಟುವಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ 2024-25ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಪಿಯುಸಿಯ ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್‍ಎಸ್‍ಎಲ್‍ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಇನ್ನಿತರ ಸಾಮಗ್ರಿಗಳು ಮತ್ತು ಸಿಇಟಿ ಹಾಗೂ ನೀಟ್ ಪರೀಕ್ಷೆಗಳ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.
ಆಭ್ಯರ್ಥಿಯು ಎಸ್‍ಎಟಿಎಸ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಮೇ.15 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 8431739087, 0824-2200766 ಅಥವಾ ಹತ್ತಿರದ ಯಾವುದೇ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪಿಯು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.