26.3 C
Karnataka
Saturday, November 23, 2024

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಚೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಮ೦ಗಳೂರು: ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಚೇರಿ ಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ ದಿನಾಂಕ ಮೇ 10 ರಂದು ನೆರವೇರಿತು.
ನೂತನ ಸುಸಜ್ಜಿತ ಆಡಳಿತ ಕಚೇರಿಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉಧ್ಘಾಟಿಸಿದರು. ಅವರ್ ಲೇಡಿ ಅಫ್ ಮಿರಾಕಲ್ಸ್‌ ಮಿಲಾಗ್ರಿಸ್ ಚರ್ಚ್‌ನ ಧರ್ಮಗುರು ವಂ. ಬೊನವೆಂಚರ್ ನಜರೆತ್ ನೂತನ ಕಚೇರಿ ಯನ್ನು ಆಶಿರ್ವಚಿಸಿದರು.


ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಅವರ್ ಲೇಡಿ ಅಫ್
ಮಿರಾಕಲ್ಸ್‌ ಮಿಲಾಗ್ರಿಸ್ ಚರ್ಚ್‌ನ ಧರ್ಮಗುರು ವಂ. ಬೊನವೆಂಚರ್ ನಜರೆತ್, ಲೂರ್ಡ್ಸ್‌ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲ ವಂ. ರೋಬರ್ಟ್ ಡಿಸೊಜ, ಹಿರಿಯ ನ್ಯಾಯವಾದಿ ಕ್ಲಾರೆನ್ಸ್‌ ಪಾಯಸ್, ಉಡುಪಿಯ ಉಪಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ, ಹಿರಿಯ ವಕೀಲ ಎಂ.ಪಿ. ನೋರೊನ್ಹಾ ಅತಿಥಿಗಳಾಗಿದ್ದರು. ಉಪಾಧ್ಯಕ್ಷ ಜೆರಾಲ್ಡ್‌ ಡಿಸಿಲ್ವಾ, ಮಹಾಪ್ರಬಂಧಕ ಶ್ರೀ ಸುನಿಲ್ ಮಿನೇಜಸ್ ವೇದಿಕೆಯಲ್ಲಿದ್ದರು.
ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಯನ್ನು ಸಂಸ್ಥಾಪಕ ಪಿ.ಎಫ್. ಎಕ್ಸ್‌ ಸಲ್ಡಾನ್ಹಾರವರ ಭಾವಚಿತ್ರಕ್ಕೆ ಹೂ ಅರ್ಪಿಸುವ ಮೂಲಕ
ಆಚರಿಸಲಾಯಿತು.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಸ್ವಾಗತಿಸಿ ಪ್ರಸ್ತಾವನೆಗೈದು, ಸಂಕಷ್ಟಗೊಳಗಾದ ಸಮುದಾಯದ ನೆರವಿಗಾಗಿ 112 ವರ್ಷಗಳ ಹಿಂದೆ ಬ್ಯಾಂಕನ್ನು ಪಿ ಎಫ್. ಸಲ್ಡಾನ ಸ್ಥಾಪಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರ ಅಮೂಲಾಗ್ರ ಬದಲಾಣೆಗೊಳಗಾಗಿದೆ. ಮಾಹಿತಿ ತಂತ್ರಜ್ಞಾನದಿನಂದ ಕ್ರಾಂತಿಕಾರಿ ಪರಿವರ್ತನೆಗಳಾಗುತ್ತಿದ್ದು ಅದಕ್ಕೆ ತೆರೆದುಕೊಳ್ಳದಿದ್ದರೆ ಬೆಳೆಯುವುದು, ಉಳಿಯುವುದು ಕಷ್ಟ ಎಂದರು. ಪ್ರಸ್ತುತ ಪಂಚ ಜಿಲ್ಲೆಗಳಿಗೆ ಶಾಖೆಗಳ ವಿಸ್ತರಣೆ ಯೋಜನೆ ಕಾರ್ಯಗತಗೊಳಿಸುತ್ತಿರುವ ಎಂ.ಸಿ.ಸಿ. ಬ್ಯಾಂಕ್ ಮುಂದೆ ರಾಜ್ಯಾದ್ಯಂತ ಶಾಖೆಗಳನ್ನು ತೆರೆಯುವ ಯೋಜನೆಹಾಕಿಗೊಂಡಿದೆ. ಬ್ಯಾಂಕಿನ ಕಾರ್ಯಕ್ಷೇತ್ರವು ಇಡೀ ಕರ್ನಾಟಕಕ್ಕೆ ವಿಸ್ತರಿಸಿದ್ದು, ಇದಕ್ಕೆ ಆರ್‌ಬಿಐನಿಂದಲೂ ಅನುಮೋದನೆ ಸಿಕ್ಕಿರುತ್ತದೆ ಎ೦ದರು.ಬ್ಯಾಂಕಿನ ಕಾನೂನು ಸಲಹೆಗಾರ
ಕ್ಲೇರೆನ್ಸ್‌ ಪಾಯಸ್ ಾವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.1000 ಕೋಟಿ ವ್ಯವಹಾರದ ಮೈಲಿಗಲ್ಲು ಆಚರಣೆಯ ಸಂದರ್ಭದಲ್ಲಿ ಹೊರತಂದಿರುವ ಕೊಡುಗೆಗಳ ಪೈಕಿಡೈಮಂಡ್ ಕಸ್ಟಮರ್ ಕಾರ್ಡ್ ಅನ್ನು ಬಿಡುಗಡೆಗೊಳಿಸಿ ಹಸ್ತಾಂತರಿಸಲಾಯಿತು.
ಬ್ಯಾಂಕಿನ ನಿರ್ದೇಶಕರಾದ ಅನಿಲ್ ಪತ್ರಾವೊ, ಹೆರಾಲ್ಡ್‌ ಮೊಂತೇರೊ, ಎಲ್‌ರೊಯ್ ಕ್ರಾಸ್ಟೊ, ರೋಶನ್ ಡಿಸೋಜ, ಡಾ ಜೆರಾಲ್ಡ್‌ ಪಿಂಟೊ, ಅಂಡ್ರ್ಯು ಡಿಸೋಜ, ಡೆವಿಡ್ ಡಿಸೋಜ, ಜೆ.ಪಿ.ರೊಡ್ರಿಗಸ್, ಮೆಲ್ವಿನ್ ವಾಸ್,ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಐರಿನ್ ರೆಬೆಲ್ಲೊ, ಸುಶಾಂತ್ ಸಲ್ಡಾನ್ಹಾ, ಶರ್ಮಿಳಾ ಮಿನೇಜಸ್, ಫೆಲಿಕ್ಸ್‌ ಡಿಕ್ರುಜ್ ಆಲ್ವಿನ್ ಪಿ. ಮೊಂತೇರೊ
ವೇದಿಕೆಯಲ್ಲಿ ಹಾಜರಿದ್ದರು, ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ವಂದಿಸಿದರು, ಮನು ಬಂಟ್ವಾಳ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles