ಮಂಗಳೂರು: ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕಾರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಡಿಫ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಫ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ. ಡಿಫ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳು, ಡಿಫ್ಲೋಮಾ ಇನ್ ಪ್ರಿಶಿಷನ್ ಮಾನ್ಯಫ್ಯಾಕ್ಚರಿಂಗ್ ವಿಭಾಗದಲ್ಲಿ 30 ವಿದ್ಯಾರ್ಥಿಗಳು, ಹಾಗೂ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮಿಷಿನ್ ಲನಿರ್ಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿದೆ.
ಕೋರ್ಸ್ಗಳ ಅಧ್ಯಯನ ಮಾಡುವಾಗ ಒಂದು ವರ್ಷದ ಇಂಟರ್ನ್ಶಿಪ್ ತರಬೇತಿ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸಿಕ ರೂ. 15,000/- ದಿಂದ ರೂ. 20,000/- ವರೆಗೆ ಶಿಷ್ಯವೇತನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ನಗರದ ಬೈಕಂಪಾಡಿಯಲಿರುವ, ಕೈಗಾರಿಕಾ ವಲಯದ, ಪ್ಲಾಟ್ ನಂಬರ್ 7ಇ ಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ, ಮೊಬೈಲ್ ಸಂಖ್ಯೆ: 9008263660, 9535423533, 0824-2408003, 9481265587, 9741667257 ಹಾಗೂ 9483920114 ಸಂಪರ್ಕಿಸುವಂತೆ ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.