26.5 C
Karnataka
Saturday, November 23, 2024

ವಿಶೇಷ ಚೇತನರ ಡಿಪ್ಲೋಮಾ ಕೋರ್ಸ್: ಅರ್ಜಿ ಆಹ್ವಾನ

ಮಂಗಳೂರು: ಮೈಸೂರಿನಲ್ಲಿರುವ ಜೆಎಸ್‍ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ನಲ್ಲಿ 2024-25ನೇ ಸಾಲಿಗೆ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ವಿಶೇಷ ಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅನುದಾನಿತ ಕೋರ್ಸುಗಳು ಆರ್ಕಿಟೆಕ್ಚರ್ ಅಸಿಸ್ಟೆಂಟ್ ಶಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಅನುದಾನ ರಹಿತ ಕೋರ್ಸ್‍ಗಳು ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಶನ್ (ಫಾರ್ ವಿಶ್ವಾಲ್ ಇಂಪೆರ್ಡ್), ಅಪಾರೆಲ್ ಡಿಸೈನ್ ಮತ್ತು ಫ್ಯಾಬ್ರಿಗೇಷನ್ ಟೆಕ್ನಾಲಜಿ ಕೋರ್ಸುಗಳು ಲಭ್ಯವಿದೆ.
ಪ್ರವೇಶಾರ್ಹತೆ : ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 35% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು, ಹಾಗೂ ಅಂಗವೈಕಲ್ಲಿಯತೆಯ ಲಕ್ಷಣಗಳನ್ನು ಹೊಂದಿರಬೇಕು. ಶೇಕಡ 40% ರಷ್ಟು ಮೇಲ್ಪಟ್ಟು ಮೂಳೆ ಮತ್ತು ಕೀಲು ಅಂಗವಿಕಲತೆ, 60 ಡಿಬಿ ಮೇಲ್ಪಟ್ಟು ಕಿವುಡು ಮತ್ತು ಮೂಗು ಅಂಗವಿಕಲತೆ, ಭಾಗಂಶ ಮತ್ತು ಪೂರ್ಣ ಅಂದತ್ವ 6/60 ಅಥವಾ 20/200 ಸ್ನೇಲೆನ್ ಹೊಂದಿರಬೇಕು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗವಕಾಶವನ್ನು ಕಲ್ಪಿಸಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.

  ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 100 ಹಾಗೂ ಎಸ್‍ಸಿ, ಎಸ್‍ಟಿ, ಸಿ-ಐ ವರ್ಗದವರಿಗೆ ರೂ. 50ರಂತೆ ನಗದು ಅಥವಾ ಡಿಡಿ ಮೂಲಕ ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಚಯ ಮೈಸೂರು ಇಲ್ಲಿಗೆ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು, ಅಥವಾ ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು, ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 15ರ ಒಳಗೆ ಕಚೇರಿಗೆ ತಲುಪಿಸಬೇಕು.
  ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ www.jsspda.org,  ಇ-ಮೇಲ್ jsspda@gmail.com  ಅಥವಾ ಮೊಬೈಲ್ ಸಂಖ್ಯೆ: 9844644937 ಅನ್ನು ಸಂಪರ್ಕಿಸುವಂತೆ ಜೆಎಸ್‍ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles