ಮಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿಯ ಹಿನ್ನಲೆಯಲ್ಲಿ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2000/ ವರೆಗೆ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ.ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣೆ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
ಬೆಳೆಹಾನಿ ಪರಿಹಾರ ಪಾವತಿಗೆ ಸಹಾಯವಾಣಿ:
ಜಿಲ್ಲಾಧಿಕಾರಿಗಳ ಕಚೇರಿ, ದೂ.ಸಂಖ್ಯೆ: 0824-2442590, 1077, ಮಂಗಳೂರು ಉಪವಿಭಾಗಾಧಿಕಾರಿಗಳ ಕಚೇರಿ ದೂ.ಸಂಖ್ಯೆ 0824-2220569, ಮಂಗಳೂರು ತಾಲ್ಲೂಕು ಕಚೇರಿ ದೂ.ಸಂಖ್ಯೆ: 0824-2220587, ಮೂಡಬಿದ್ರೆ ತಾಲ್ಲೂಕು ಕಚೇರಿ ದೂ.ಸಂಖ್ಯೆ: 08258-238100 ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದ್ದಾರೆ.