24.9 C
Karnataka
Friday, November 15, 2024

ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.
ಬಂಟ್ಸ್ ಹಾಸ್ಟೇಲ್ ನಲ್ಲಿರುವ ಶ್ರೀಮತಿ ಗೀತಾ ಎಸ್ ಎಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ 2022-23 ನೇ ಸಾಲಿನ 103 ನೇ ವಾರ್ಷಿಕ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ 115 ವರ್ಷಗಳ ಇತಿಹಾಸ ಇದೆ. ಈ ನಿಟ್ಟಿನಲ್ಲಿ ಮಾತೃಸಂಘದ ಬಹು ಕನಸಿನ ಯೋಜನೆಯಾದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಗೆ ಎಂಆರ್ ಜಿ ಗ್ರೂಪ್ ನ ಚೆಯರ್ ಮೆನ್ ಕೆ ಪ್ರಕಾಶ್ ಶೆಟ್ಟಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಪ್ರಕಾಶ್ ಶೆಟ್ಟಿಯವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಅದೇ ರೀತಿ ವಿಶ್ವ ಬಂಟರ ಮಾಹಿತಿ ಕೋಶ ಸಮಿತಿಗೆ ಹೇರಂಭ ಇಂಡಸ್ಟೀಸ್ ನ ಆಡಳಿತ ನಿರ್ದೇಶಕ ಕನ್ಯಾನ ಕುಳೂರು ಸದಾಶಿವ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಒಂದು ಯೋಜನೆಗೆ ಒಂದು ಕೋಟಿ ರೂಪಾಯಿಗೂ ಮಿಕ್ಕಿ ಖರ್ಚಗಲಿದ್ದು, ಅದರ ಸಂಪೂರ್ಣ ವೆಚ್ಚವನ್ನು ಕನ್ಯಾನ ಸದಾಶಿವ ಶೆಟ್ಟಿಯವರು ಭರಿಸಲಿದ್ದಾರೆಂದು ಅಜಿತ್ ಕುಮಾರ್ ರೈ ತಿಳಿಸಿದರು.ಶ್ರೀ ರಾಮಕೃಷ್ಣ ಶಾಲಾ ಕಾಲೇಜ್ ನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇಲ್ಲಿರುವ ಮಕ್ಕಳಿಗೆ ಹಲವಾರು ಸವಲತ್ತುಗಳು ದೊರಕುತ್ತಿದೆ. ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು.
ಬಂಟ ಸಮಾಜವನ್ನು ಕೇಂದ್ರ ಸರಕಾರವು ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ. ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಸಮಾಜವು ಪ್ರವರ್ಗ 2 ( ಎ) ಯಲ್ಲಿ ಸೇರಲು ಅರ್ಹರಾಗಿದ್ದರೂ ಬಂಟ ಸಮುದಾಯವನ್ನು ಪ್ರವರ್ಗ 3 (ಬಿ) ಯಲ್ಲಿ ಸೇರಿಸಿರುವ ಕಾರಣ ಸಮುದಾಯ ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತರಾಗಿ ಸಮುದಾಯಕ್ಕೆ ತುಂಬಾ ಹಿನ್ನಡೆಯಾಗಿದೆ ಎಂದು ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.
2022-23 ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ ಮಂಡಿಸಿದರು. 2022-23 ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳನ್ನು ಕೋಶಾಧಿಕಾರಿ ಸಿಎ. ರಾಮ್ ಮೋಹನ್ ರೈ ಟಿ ಮಂಡಿಸಿದರು.
ಸಭೆಯಲ್ಲಿ ವಿದ್ಯಾರ್ಥಿ ಭವನಗಳ, ಶಾಲಾ ಕಾಲೇಜುಗಳ, ತಾಲೂಕು ಸಮಿತಿಗಳ ವಾರ್ಷಿಕ ವರದಿಯನ್ನು ಮಂಡಿಸಲಾಯಿತು. ಉಮೇಶ್ ರೈ ಪದವುಮೇಗಿನ ಮನೆ, ಶಾಲಿನಿ ಶೆಟ್ಟಿ, ಸಂಜೀವ ರೈ, ಕಾವು ಹೇಮನಾಥ ಶೆಟ್ಟಿ, ವಸಂತ ಶೆಟ್ಟಿ, ಮಿಥುನ್ ಹೆಗ್ಡೆ ಉಡುಪಿ, ವಿಜಯ ಶೆಟ್ಟಿ ಕಾರ್ಕಳ, ಆವರ್ಸೆ ಸುಧಾಕರ ಶೆಟ್ಟಿ, ದಯಾನಂದ ರೈ ಮನವಳಿಕೆ, ಜಯರಾಮ ಭಂಡಾರಿ, ಸುಧೀರ್ ಕುಮಾರ್ ರೈ ವರದಿಗಳನ್ನು ಮಂಡಿಸಿದರು.
2023-24 ನೇ ಸಾಲಿಗೆ ಲೆಕ್ಕಪರಿಶೋಧಕರಾಗಿ ದಯಾಶರಣ್ ಶೆಟ್ಟಿ ಆಯ್ಕೆಯಾದರು.
ಅಜಿತ್ ಕುಮಾರ್ ರೈ ಸ್ವಾಗತಿಸಿದರು. ದೀಪಿಕಾ, ಸಿಂಧೂರ, ಸಹನ ಪ್ರಾರ್ಥನೆಗೈದರು. ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ವಂದಿಸಿದರು. ಶರತ್ ಶೆಟ್ಟಿ ಪಡುಪಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles