26.3 C
Karnataka
Saturday, November 16, 2024

ಮಂಗಳೂರು ವಿಮಾನ ದುರಂತ ಸ್ಮಾರಕ ದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು: ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ.ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದೆ. ಬುಧವಾರ ಬೆಳಗ್ಗೆ 9.30 ಗಂಟೆಗೆ ಜಿಲ್ಲಾಡಳಿತ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಪುಷ್ಪ ಗುಚ್ಛ ಇರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು
2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ಚಾಲಕನ ಲೆಕ್ಕಾಚಾರ ತಪ್ಪಿ ಮಿತಿಗಿಂತ ಸ್ವಲ್ಪ ಮೀಟರ್‌ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಟರ್ಮಿನಲ್ ಬಳಿ ಕೆಂಜಾರಿನ ಕಡಿದಾದ ಗುಡ್ಡದಿಂದ ಕೆಳಗೆ ಉರುಳಿತ್ತು ಬೆಂಕಿ ಹತ್ತಿ ಕೊಂಡ ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸಹಿತ 158 ಮಂದಿ ಮೃತರಾಗಿದ್ದರು.ಈ ಪೈಕಿ 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬ್ಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದರು.ಅಪಘಾತದಲ್ಲಿ ಬದುಕುಳಿದವರು 8ಮಂದಿ ಮಾತ್ರ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸ್ಮಾರಕಕ್ಕೆ ಪುಷ್ಪಾರ್ಚನೆ ಗೈದು ಗೌರವ ಸಲ್ಲಿಸಿ ಘಟನೆಯ ಬಗ್ಗೆ ನೆನೆದು ಸಂತಾಪ ಸೂಚಿಸಿದರು. ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ, ಪುಷ್ಪಾರ್ಚನೆ ಗೈದು ಶದ್ಧಾಂಜಲಿ ಸಲ್ಲಿಸಿದರು.
ನವ ಮಂಗಳೂರು ಬಂದರು ಪ್ರಾಧಿಕಾರದ ಅಧೀಕ್ಷಕ ಇಂಜಿನಿಯರ್ ಶೇಖರ್ ಲಗ್‍ವಂಕರ್, ಮಂಗಳೂರು ತಹಶಿಲ್ದಾರ್ ಪ್ರಶಾಂತ್ ವಿ. ಪಾಟೀಲ್, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಮೃತರ ಮೃತರ ಕುಟುಂಬಸ್ಥರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles