24.5 C
Karnataka
Monday, November 18, 2024

ಪ್ರೆಸ್ ಕ್ಲಬ್ ಸಮಾಚಾರ‘ ಇ-ಪೇಪರ್ ದ್ವಿತೀಯ ಸಂಚಿಕೆ ಅನಾವರಣ

ಮಂಗಳೂರು : ಪತ್ರಕರ್ತರು ತಮ್ಮ ಸೃಜನಶೀಲ ಬರಹಗಳನ್ನು ಪತ್ರಿಕೆಗಳಲ್ಲಿ ಪ್ರಕಟಗೊಳಿಸುವುದಕ್ಕೆ ಮಾತ್ರ ಸೀಮಿತಗೊಳಿಸದೆ ಅವುಗಳ ಸಂಗ್ರಹವನ್ನು ಪುಸ್ತಕ ರೂಪದಲ್ಲಿ ಹೊರತಂದರೆ ಶಾಶ್ವತ ದಾಖಲೆಯಾಗಿ ಉಳಿಯುತ್ತದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ‘ ಇ-ಪೇಪರ್ ಇದರ ದ್ವಿತೀಯ ಸಂಚಿಕೆಯನ್ನು ಗುರುವಾರ ನಗರದ ಪತ್ರಿಕಾ ಭವನದಲ್ಲಿ ಅನಾವರಣಗೊಳಿಸಿ ಮಾತನಾಡಿದ ಅವರು ‘ ಪತ್ರಕರ್ತರ ಬರಹಗಳ ದಾಖಲೀಕರಣ ಯುವ ಬರಹಗಾರರಿಗೆ ಸ್ಪೂರ್ತಿಯ ಸೆಲೆಯಾಗಲು ಸಾಧ್ಯ ಎಂದರು.
ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್‌ನ ಚಟುವಟಿಕೆಗಳನ್ನು ದಾಖಲಿಸುವ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಪತ್ರಿಕೆ ಒಂದು ಉತ್ತಮ ಪ್ರಯೋಗವಾಗಿದ್ದು , ಇದರಲ್ಲಿ ಪತ್ರಕರ್ತರಿಗೆ ಉಪಯುಕ್ತವಾಗುವ ಲೇಖನಗಳು ಕೂಡಾ ಪ್ರಕಟವಾಗಲಿ ಎಂದು ಅವರು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ಜನತೆಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಆಡಳಿತ ವ್ಯವಸ್ಥೆಯ ಗಮನ ಸೆಳೆಯುವ ಕಾರ್ಯವನ್ನು ಪತ್ರಿಕೆಗಳು ಮಾಡುತ್ತಿರುವುದು ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles