ಮಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ/ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಶೇಕಡಾ 25% ಗಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು ಹಾಗೂ ಹೆಚ್ಐವಿ ರೋಗಕ್ಕೆ ತುತ್ತಾದ ಪೋಷಕರ ಮಕ್ಕಳು ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳಿಗೆ ಶೇಕಡಾ 10% ಮೀಸಲಾತಿಯನ್ನು ನಿಗಧಿಪಡಿಸಿದೆ.
6ನೇ ತರಗತಿ ಪ್ರವೇಶಾತಿಗೆ ಅನುಮೋದನೆ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.