ಮಂಗಳೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕ್ರೀಡಾಪಟುಗಳಿಗೆ ವಾರ್ಷಿಕ ರೂ. 10,000 ದಂತೆ ಪೆÇ್ರೀತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿರಬೇಕು, ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರಬೇಕು, ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2023 ಜನವರಿ 1 ರಿಂದÀ 2024 ಮಾರ್ಚ್ 31ರ ವರೆಗೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರಬೇಕು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ ಕ್ರೀಡಾಪಟುಗಳು https://sevasindhuservices.Karnataka.gov.in ಟಿ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.