23.1 C
Karnataka
Saturday, November 23, 2024

ಮಂಗಳೂರು: ಬೋರ್ಡುಗಳಲ್ಲಿ ಕನ್ನಡ ಕಡ್ಡಾಯ

ಮಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರಗಳ ಉದ್ದಿಮೆಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೇಲ್‍ಗಳು ಮುಂತಾದವುಗಳು ತಮ್ಮ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನುಶೇ. 60 ಪ್ರದರ್ಶಿಸುವುದು ಕಡ್ಡಾಯವಾಗಿದೆ.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರಿಗೆ ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಶೇ. 60% ರಷ್ಟು ಪ್ರದರ್ಶಸುವ ನಿಬಂಧನೆಯನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಉದ್ದಿಮೆ ಪರವಾನಿಗೆ ನವೀಕರಣ ಅಥವಾ ಹೊಸದಾಗಿ ಮಂಜೂರಾತಿ ಸಮಯದಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದ್ದು. ಸಾಕಷ್ಟು ಉದ್ದಿಮೆದಾರರು ಸರ್ಕಾರದ ನೀತಿಯಂತೆ ಕನ್ನಡ ನಾಮಫಲಕವನ್ನು ಪ್ರದರ್ಶಿಸುತ್ತಿರುವುದು ಕಂಡುಬರುತ್ತಿದೆ.
ಕೆಲವೊಂದು ಉದ್ದಿಮೆದಾರರು ಸದ್ರಿ ಆದೇಶವನ್ನು ಉಲ್ಲಂಘಿಸಿ ಆಂಗ್ಲ ಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬರುತ್ತಿರುವ ದೂರುಗಳನ್ನು ಗಂಭಿರವಾಗಿ ಪರಿಗಣಿಸಲಾಗಿದೆ. ಆದುದರಿಂದ ಇನ್ನು ಮುಂದೆ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಿಗೆಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles