ಮ೦ಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭವು ಜೂ.9 ರಂದು ಸಂಜೆ 7.15 ಕ್ಕೆ ನವದೆಹಲಿಯಲ್ಲಿ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪ್ರತೀ ಬೂತ್ನಲ್ಲಿ ಅಧ್ಯಕ್ಷರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಬೇಕೆಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಕರೆ ನೀಡಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪದಾಧಿಕಾರಿ ಪ್ರಮುಖರ ಸಭೆಯಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಗಳಿಸಿರುವ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀಯವರು ಸತತ 3ನೇ ಅವಧಿಗೆ
ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಮೇತ ಜಿಲ್ಲಾದಾದ್ಯಂತ ವಿಜಯೋತ್ಸವ ಆಚರಣೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪ್ರಮುಖರು, ಕಾರ್ಯಕರ್ತರು, ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಜೆ 6.30 ಗಂಟೆಯಿಂದ ನೇರ ಪ್ರಸಾರದ ಮೂಲಕ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.