ಮಂಗಳೂರು: ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಜೂನ್ 12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊ೦ಡಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420, 9364062580. ಪೊಲೀಸ್ ನಿರೀಕ್ಷಕರ ಕಚೇರಿ-1 :0824-2427237, 936402691. ಪೊಲೀಸ್ ನಿರೀಕ್ಷಕರ ಕಚೇರಿ-2 :0824-2427237,9364062692. ಪೊಲೀಸ್ ನಿರೀಕ್ಷಕರ ಕಚೇರಿ-3 :0824-2427237, 9972991718. ಪೊಲೀಸ್ ನಿರೀಕ್ಷಕರ ಕಚೇರಿ -3 :0824-2427237, 9481639937. ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.