22.2 C
Karnataka
Thursday, November 21, 2024

ಎಸ್‍ಎಸ್‍ಎಲ್‍ಸಿ ಪರೀಕ್ಷೆ -2 ನಿಷೇಧಾಜ್ಞೆ ಜಾರಿ

ಮಂಗಳೂರು: ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14ರಿಂದ ಜೂನ್ 22 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ -2 ನಡೆಯಲಿದ್ದು, ಪರೀಕ್ಷೆ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles