26.5 C
Karnataka
Saturday, November 23, 2024

ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ಜಿಲ್ಲೆಯಾದ್ಯಂತ ಜೂನ್ 21ರಂದು ಹಮ್ಮಿಕೊಳ್ಳಲಾಗಿರುವ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ. ಅವರು ಅದಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶನಿವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಡಳಿತ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪದವಿ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್. ಘಟಕಗಳು, ವಿವಿಧ ಯೋಗ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಮುಖ್ಯ ಕಾರ್ಯಕ್ರಮ ಮಂಗಳೂರಿನ ಪುರಭವನದ ಮಿನಿ ಸಭಾಂಗಣದಲ್ಲಿ ಜೂ. 21ರಂದು ಬೆಳಿಗ್ಗೆ 8 ಗಂಟೆಗೆ ನಡೆಯಲಿದೆ ಎಂದರು. ಮಿನಿ ಸಭಾಂಗಣದಲ್ಲಿ ಸ್ಪಚ್ಚತಾ ಕಾರ್ಯ, ಕುಡಿಯುವ ನೀರು ಪೂರೈಕೆ ಹಾಗೂ ಶೌಚಾಲಯಗಳ ವ್ಯವಸ್ಥೆಯನ್ನು ಮಂಗಳೂರು ಮಹಾನಗರಪಾಲಿಕೆ ನಿರ್ವಹಿಸಬೇಕೆಂದು ಅವರು ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಮುಹಮ್ಮದ್ ಇಕ್ಬಾಲ್ ಮಾತನಾಡಿ, ಜಿಲ್ಲೆಯ ಶಾಲಾ ಕಾಲೇಜುಗಳು, ವಸತಿ ಶಾಲೆಗಳು, ಆಯುಷ್ ಆರೋಗ್ಯ ಮಂದಿರಗಳು ಮತ್ತು ಸಂಘ ಸಂಸ್ಥೆಗಳಲ್ಲಿ ಸುಮಾರು 1 ಲಕ್ಷ ಯೋಗಾಸಕ್ತರಿಗೆ ಯೋಗ ತರಬೇತಿಗಳನ್ನು ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಯೋಗೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎ೦ದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಎಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕಕ್ಷಕಿ ಜೆಸಿಂತಾ ಡಿ’ಸೊಜ ವೇದಿಕೆಯಲ್ಲಿದ್ದರು. ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಪ್ರಮುಖರು, ಯೋಗಾಸಕ್ತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles