ಮಂಗಳೂರು : ನಗರದ ಕೆನರಾ ಹೈಸ್ಕೂಲ್ ಸಿ ಬಿಎಸ್‌ಸಿ ಶಾಲೆಯ ವಿದ್ಯಾರ್ಥಿ ಮಂತ್ರಿ ಮಂಡಲದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ಜೂ. 22 ರಂದು ಟಿ ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಸಮೂಹ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಸಿಎ ಗಿರಿಧರ್ ಕಾಮತ್ ಅವರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕೆನರಾ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ತಮ್ಮ ಛಾಪನ್ನು ಮೂಡಿಸಿದ್ದಾರೆ. ಮಂತ್ರಿಮಂಡಲದಲ್ಲಿ ಆಯ್ಕೆಯಾದ ನಾಯಕರು ಶಾಲಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಶಾಲೆಯ ಮುನ್ನಡೆಗೆ ಪಾತ್ರರಾಗಿ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಇತರರಿಗೆ ಮಾದರಿಯಾಗಬೇಕೆಂಬ ಆಶಯವನ್ನು ವ್ಯಕ್ತಪಡಿಸಿದರು.
ಕೆನರಾ ಸಮೂಹ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಕೆನರಾ ಸಿಬಿಎಸ್‌ಸಿ ಶಾಲೆಯ ಸಂಚಾಲಕ ಕೆ ಸುರೇಶ್ ಕಾಮತ್ ರವರು ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕೆಂದರು. ಶಾಲಾ ಪ್ರಾಂಶುಪಾಲ ಸುರೇಖಾ ಆರ್ ಭಟ್ ಅವರು ಶಾಲಾ ನಾಯಕರಾದ ವಿನೀತ ವಿ ಬಾಳಿಗ, ಇಶಾನ್ ನಾವಡ ಹಾಗೂ ಇತರ ಸಂಘದ ಸದಸ್ಯರಿಗೆ ಪ್ರಮಾಣ ವಚನವನ್ನು ಬೋಧಿಸಿದರು.ಕಾರ್ಯಕ್ರಮದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಉಜ್ವಲ್ ಮಲ್ಯ, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಾದ ಅನ್ನಿಕಾ ಸೋಮಯಾಜಿ, ಸಾಯಿಹರ್ಷದ್
ಸ್ವಾಗತಿಸಿದರು. ಅನಿಕೇತ್ ರಾವ್ ಕೊಣಾಜೆ ವಂದಿಸಿದರು.ಶಿಕ್ಷಕಿ ನೈನಾ ಮೆಂಡೋನ್ಸ ಕಾರ್ಯಕ್ರಮ ನಿರೂಪಿಸಿದರು.