23.8 C
Karnataka
Tuesday, November 19, 2024

ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅಗತ್ಯ : ಸಿವಿಲ್ ನ್ಯಾಯಾಧೀಶರು

ಮಂಗಳೂರು: ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾದದ್ದು, ವಿದ್ಯಾರ್ಥಿಗಳಲ್ಲಿ ಆಗುವಂತಹ ಬದಲಾವಣೆ, ನಡವಳಿಕೆ, ವಿದ್ಯಾರ್ಥಿಗಳ ಚಲನವಲನಗಳ ಬಗ್ಗೆ ಹೆಚ್ಚಾಗಿ ಶಿಕ್ಷಕರಿಗೆ ತಿಳಿದಿರುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗದಂತೆ ಶಿಕ್ಷಕರು ಅವರೊಂದಿಗೆ ಸಮಾಲೋಚನಗಳನ್ನು ನಡೆಸಿ ಅವರಿಗೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಅವರು ಹೇಳಿದರು.

ಅವರು ಬುಧÀವಾರ ಜಿಲ್ಲಾ ಪಂಚಾಯತ್, ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ “ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಾಲೆಗಳಲ್ಲಿ ಯಾವುದಾದರೂ ಒಬ್ಬ ವಿದ್ಯಾರ್ಥಿಯು ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ವಿಷಯವನ್ನು ಸಂಬಂಧಪಟ್ಟ ಇಲಾಖೆಗೆ ಅಧಿಕಾರಿಗಳಿಗೆ ತಿಳಿಸುವ ಕೆಲಸವಾಗಬೇಕು, ಅಲ್ಲದೆ ಶಾಲೆಯ ಘನತೆ, ಗೌರವದ ಪ್ರಶ್ನೆ ಎಂದು ಇಂತಹ ಗಂಭೀರ ವಿಚಾರವನ್ನು ಮುಚ್ಚಿ ಹಾಕಿದ್ದಲ್ಲಿ ಮುಂದಿನ ದಿನ ಪರಿಣಾಮವು ಇನ್ನಷ್ಟು ಗಂಭೀರವಾಗಬಹುದು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಉಪ ಪೊಲೀಸ್ ಆಯುಕ್ತ ಬಿ.ಪಿ ದಿನೇಶ್ ಕುಮಾರ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಬಳಿಕ ಮಾತನಾಡಿದ ಅವರು ಈಗಾಗಲೇ ಶಾಲಾ ಕಾಲೇಜುಗಳಲ್ಲಿ ಆಂಟಿ ಡ್ರಗ್ ಸೆಲ್ ಘಟಕವನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಮಾದಕ ವ್ಯಸನದ ಸೇವನೆ ಕೇವಲ ಒಬ್ಬ ವ್ಯಕ್ತಿಯ ಮೇಲೆ ಮಾತ್ರ ಪರಿಣಾಮಬೀರದೆ ಆತನ ಕುಟುಂಬ, ಸಮಾಜದಮೇಲೂ ಪರಿಣಾಮ ಬೀರುತ್ತದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ, ವೆನಲಾಕ್ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಶಸ್ತ್ರ್ರಚಿಕಿತ್ಸಕರಾದ ಡಾ. ಜೆಸಿಂತಾ ಡಿಸೋಜಾ, ಲಿಂಕ್ ವ್ಯಸನ ಮುಕ್ತ ಮತ್ತು ಪುನರ್ವಸತಿ ಕೇಂದ್ರ ಇದರ ಆಡಳಿತಾಧಿಕಾರಿ ಲಿಡಿಯಾ ಲೋಬೊ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಎಸ್ ಪಟೆಗಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles