19 C
Karnataka
Monday, November 18, 2024

ಡೆಂಗ್ಯೂ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: – ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಪ್ರತಿ ಶುಕ್ರವಾರ ಲಾರ್ವ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್ ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ, ಮನೆಯ ಪರಿಸರದ ಸುತ್ತಮುತ್ತ ನೀರು ನಿಂತು ಲಾರ್ವ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇಂದು ರಾಜ್ಯಾದ್ಯಂತ ಈ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.

ಇನ್ನು ಮುಂದೆ ಪ್ರತಿ ಶುಕ್ರವಾರ ಸಾರ್ವಜನಿಕರು ಸ್ವತಃ ತಮ್ಮ ಮನೆಗಳಿಗೂ ಹಾಗೂ ಸರಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಸಿಬ್ಬಂದಿಗಳು ನೀರು ತುಂಬಿರುವ ಡ್ರಮ್, ಟ್ಯಾಂಕಿ, ಬ್ಯಾರಲ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು. ಅದೇ ರೀತಿ ಮಳೆ ನೀರು ನಿಲ್ಲುವ ತೊಟ್ಟಿ, ಹಳೆ ಟಯರ್ ಮತ್ತಿತರ ವಸ್ತುಗಳನ್ನು ವಿಲೇವಾರಿ ಮಾಡಬೇಕು, ಇದರಿಂದ ಸೊಳ್ಳೆಗಳ ಉತ್ಪತ್ತಿ ತಾಣ ನಾಶವಾಗಿ ಡೆಂಗ್ಯೂ ಜ್ವರವನ್ನು ನಿಯಂತ್ರಿಸಬಹುದು ಎಂದು ಅವರು ಹೇಳಿದರು.

ಜಿಲ್ಲಾ ರೋಗವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಅವರು ಮಾತನಾಡಿ, ಪ್ರತಿ ಶುಕ್ರವಾರ ಸೊಳ್ಳೆ ನಿರ್ಮೂಲನ ದಿನ ಆಚರಿಸಿ ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಡೆಂಗ್ಯೂ ಜ್ವರ ನಿಯಂತ್ರಣದಲ್ಲಿ ಕೈಜೋಡಿಸಬೇಕೆಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್‌ ಕುಮಾರ್, ಆರೋಗ್ಯಧಿಕಾರಿ ಡಾ. ತಿಮ್ಮಯ್ಯ, ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಜಯ್ ಬಂಡಾರಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ,ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles