ಮಂಗಳೂರು: ಅರಣ್ಯ, ಜೀವಿಶಾಸ್ತ್ರ, ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಜುಲೈ 1ರಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸೋಮವಾರ ಬೆಳಗ್ಗೆ 8.10 ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 10.30 ಬಂಟ್ವಾಳ ತಾಲೂಕಿನ ಕಾವಲಪಡೂರು, ಅಲಂಪುರಿಯಲ್ಲಿರುವ, ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ಹಮ್ಮಿಕೊಳ್ಳಲಾದ ದಶಲಕ್ಷ ಗಿಡಗಳ ನಾಟಿ ಕಾರ್ಯಕ್ರಮ, ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಅರಣ್ಯ ಭವನದಲ್ಲಿ ಅರಣ್ಯ, ಪರಿಸರ ಮತ್ತು ಸಿ.ಆರ್.ಜೆಡ್ ಅಧಿಕಾರಿಗಳೊಂದಿಗೆ ಚರ್ಚೆ, ರಾತ್ರಿ 8.15ಕ್ಕೆ ವಿಮಾನದÀ ಮೂಲಕ ಬೆಂಗಳೂರಿಗೆ ತೆರಳುವರು.