25.5 C
Karnataka
Saturday, November 16, 2024

ಹಸು, ಎಮ್ಮೆ ಖರೀದಿ: ಮಹಿಳೆಯರಿಗೆ ಸಹಾಯಧನ

ಮಂಗಳೂರು: 2024-25ನೇ ಸಾಲಿನಲ್ಲಿ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ಪಡೆಯುವ ಸಾಲ ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6% ಬಡ್ಡಿ ಸಹಾಯಧನ ನೀಡಲಾಗುವುದು.

  ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ  ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ ರೂ. 65,000 ಸಾಲದ ಮೊತ್ತಕ್ಕೆ ಶೇ.6% ಬಡ್ಡಿ ಸಹಾಯಧನ (ರೂ.3,625/-) ನೀಡುವ ಯೋಜನೆಯಾಗಿದೆ. ಈ ಕಾರ್ಯಕ್ರಮವನ್ನು ವಾಣಿಜ್ಯ ಬ್ಯಾಂಕ್‍ಗಳ ಸಮನ್ವಯದೊಂದಿಗೆ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗೆ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವ ರೈತ ಮಹಿಳೆಯರು ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ತಾಲೂಕು ಪಶು ಆಸ್ಪತ್ರೆಗಳನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles