23.8 C
Karnataka
Tuesday, November 19, 2024

ಜರ್ಮನಿಯಲ್ಲಿ ನರ್ಸಿಂಗ್ ಉದ್ಯೋಗ

ಮಂಗಳೂರು: ಜರ್ಮನಿ ಸರ್ಕಾರದ ಮಾನ್ಯತೆ ಪಡೆದಿರುವ ಮೆ॥ ಟ್ಯಾಲೆಂಟ್ ಆರೆಂಜ್ ಸಂಸ್ಥೆಯಿಂದ ಭಾರತ ದೇಶದಿಂದ ನರ್ಸ್ ಆಗಿ ಕೆಲಸನಿರ್ವಹಿಸಲು ಬಿ.ಎಸ್ಸಿ, ಜಿಎನ್‌ಎಂ ವಿದ್ಯಾರ್ಹತೆ ಹೊಂದಿರುವ
ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಸ್ಥೆಯು ನರ್ಸಿಂಗ್ ವೃತ್ತಿಯಲ್ಲಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜರ್ಮನ್ ಸರ್ಕಾರದಿಂದ ಮಾನ್ಯತೆ ಪಡೆದಿದ್ದು, ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಕೇರಳ ರಾಜ್ಯದ ತಿರುವನಂತಪುರದಲ್ಲಿ 8 ತಿಂಗಳ ಕಾಲ ಜರ್ಮನ್ ಭಾಷೆಯ ಬಗ್ಗೆ ತರಬೇತಿ ನೀಡಲಿದೆ. ಸಂಸ್ಥೆಯ ವತಿಯಿಂದ ಊಟದ ವ್ಯವಸ್ಥೆ ಹಾಗೂ ಉಚಿತ ವಸತಿ ಸೌಲಭ್ಯ ನೀಡುವುದಲ್ಲದೆ, ಉಚಿತ ಪ್ರಯಾಣದ ವ್ಯವಸ್ಥೆಯನ್ನು ಒದಗಿಸುವುದಾಗಿ ತಿಳಿಸಿದೆ.
ಅರ್ಹತೆಗಳು :
38 ವರ್ಷದೊಳಗಿನ ಹೊಸಬರು ಮತ್ತು ಅನುಭವಿಯುಳ್ಳ ಮಹಿಳೆಯರು, ಪುರುಷ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಬಿ.ಎಸ್ಸಿ (ನರ್ಸಿಂಗ್) – ಬಿಎಸ್ಸಿ, ಜಿಎನ್‌ಎಂ ಭಾರತೀಯ ನರ್ಸಿಂಗ್ ಲೈಸನ್ಸ್‌
ಹೊಂದಿರುವುದು ಕಡ್ಡಾಯವಾಗಿದೆ ಹಾಗೂ ಮಹಿಳಾ ಅಭ್ಯರ್ಥಿಗಳು ಚಿಕ್ಕ ಮಕ್ಕಳನ್ನು ಹೊಂದಿದ್ದಲ್ಲಿ, ತಮ್ಮೊಂದಿಗೆ ಕರೆದೊಯ್ಯುವ ಅವಕಾಶವಿರುವುದಿಲ್ಲ ಎಂದು ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles