23.8 C
Karnataka
Tuesday, November 19, 2024

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಕಾರ್ಮಿಕಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ (ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 31-01-2025 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ ಮತ್ತು ಪ.ಪಂ ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಕಾರ್ಮಿಕರ ಮಾಸಿಕ
ವೇತನ ರೂ. 35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ. ಶೈಕ್ಷಣಿಕ ಪ್ರೋತ್ಸಾಹ ಧನಕ್ಕಾಗಿ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್ ವಿಳಾಸwww.klwbapps.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕುಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ ಚಿಠಿ; 2ನೇ ಮಹಡಿ, ಮತ್ತೀಕೆರೆ ಮುಖ್ಯ ರಸ್ತೆ, ಯಶವಂತಪುರ,ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602562 ಸಂಪರ್ಕಿಸುವಂತೆ ಸಹಾಯಕ
ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles