16.7 C
Karnataka
Saturday, November 23, 2024

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವೇಗ ನಿರ್ಬಂಧ

ಮಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಗಳ ಕೆಲವು ವಿಭಾಗಳು ಹಾನಿಗೊಂಡಿದ್ದು ಹೆಚ್ಚಿನ ವೇಗದ ಸಂಚಾರ ಅಸುರಕ್ಷಿತವಾಗಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಬಳಕೆದಾರರ ಸುರಕ್ಷತೆಯ ಹಿತದೃಷ್ಟಿಯಿಂದ, ರಾಷ್ಟ್ರೀಯ ಹೆದ್ದಾರಿ ಆಡಳಿತವು ಜಿಲ್ಲೆಯ ಎನ್‍ಎಚ್-66ನಲ್ಲಿ ಸುರತ್ಕಲ್ ನಿಂದ ತೊಕ್ಕೊಟ್ಟು ಜಂಕ್ಷನ್ ವರೆಗೆ ಮತ್ತು ಬಿ.ಸಿ ರೋಡ್ ನಿಂದ ನಂತೂರು ಜಂಕ್ಷನ್ ವರೆಗೆ ಎನ್‍ಎಚ್-75ರಲ್ಲಿ ದ್ವಿಚಕ್ರ, ತ್ರಿಚಕ್ರ ಮತ್ತು ಘನ ವಾಹನಗಳನ್ನು ಗಂಟೆಗೆ 40 ಕಿ.ಮೀ.ಗೆ ನಿರ್ಬಂಧಿಸಲಾಗಿದೆ.

ನಿರಂತರ ಮಳೆಯಿಂದಾಗಿ, ರಾಷ್ಟ್ರೀಯ ಹೆದ್ದಾರಿ ಬಳಕೆದಾರರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಂಟೆಗೆ 60 ಕಿಮೀ ವೇಗದ ಮಿತಿಯಲ್ಲಿ ಚಾಲನೆ ಮಾಡಲು ಸಲಹೆ ನೀಡಲಾಗಿದೆ ಎಂದು ಭಾರತೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ಅನುಷ್ಟಾನ ಘಟಕ ಇಲ್ಲಿನ ಯೋಜನಾ ನಿರ್ದೇಶಕರು ಮತ್ತು ಹೆದ್ದಾರಿ ನಿರ್ವಾಹಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles