17.5 C
Karnataka
Friday, November 22, 2024

ಯಕ್ಷಗಾನದ ಪರಂಪರೆ ಉಳಿಸುವ ನಿಟ್ಟಿನಲ್ಲಿ ಕಲಾವಿದರ ಸಮಾವೇಶ : ಪ್ರೊ| ಕೆ. ಚಿನ್ನಪ್ಪ ಗೌಡ

ಮ೦ಗಳೂರು: ಯಕ್ಷಗಾನದಲ್ಲಿ ಗಾನ, ನಾಟ್ಯ ವೈಭವವು ಪ್ರಧಾನವಾಗದೇ ಪರಂಪರೆ ಉಳಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಮೇಳದ ಕಲಾವಿದರು ಕನಿಷ್ಠ ವರ್ಷಕ್ಕೊಮ್ಮೆಯಾದರೂ ಸಮಾವೇಶ ನಡೆಸಿ, ಯಕ್ಷಗಾನದ ಪರಂಪರೆ ಉಳಿಸುವ ನಿಟ್ಟಿನಲ್ಲಿ ವಿಚಾರ ವಿಮರ್ಶೆ ನಡೆಸಬೇಕು ಎಂದು ಕರ್ನಾಟಕ ಜಾನಪದ ವಿವಿ ವಿಶ್ರಾಂತ ಕುಲಪತಿ ಪ್ರೊ| ಕೆ. ಚಿನ್ನಪ್ಪ ಗೌಡ ಹೇಳಿದರು.
ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಆಯೋಜಿಸಲಾದ ಏಳನೇ ವರ್ಷದ ‘ಭ್ರಾಮರಿ ಯಕ್ಷ ವೈಭವ ೨೦೨೪’, ಯಕ್ಷ ಛಾಯಾಚಿತ್ರ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಕ್ಷಗಾನ ಕಲಾವಿದರು ಕೇವಲ ಕಲಾವಿದರಲ್ಲ. ಅವರು ಯಕ್ಷಗಾನದ ವಿದ್ವಾಂಸರೂ ಆಗಿದ್ದಾರೆ. ಆಯಾ ವರ್ಷದ ತಿರುಗಾಟದ ಬಗ್ಗೆ ವಿಮರ್ಶೆ ನಡೆದಾಗ ಎಲ್ಲಿ ತಪ್ಪಿದ್ದೇವೆ ಎಂಬುದು ತಿಳಿಯುತ್ತದೆ. ಕಲಾವಿದರು ಪ್ರದರ್ಶನಕ್ಕೆ ಮುನ್ನ ಪರಸ್ಪರ ಸಮಾಲೋಚನೆ ನಡೆಸಿ, ಪರಂಪರೆ ಗಟ್ಟಿಗೊಳಿಸಬೇಕು. ಸಮಾಜಕ್ಕೆ ನೈತಿಕತೆಯನ್ನು ಕಟ್ಟಿಕೊಡುವ ಏಣಿಯಾದ ಯಕ್ಷಗಾನದ ಸಂಕೀರ್ಣ ಪರಂಪರೆ ಉಳಿಸಬೇಕು ಎಂದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಮಂಗಳೂರು ನಗರದ ಹೃದಯಭಾಗದಲ್ಲಿ ಪ್ರತಿವರ್ಷ ರಾತ್ರಿಪೂರ್ತಿ ಯಕ್ಷಗಾನ ಪ್ರದರ್ಶನ ಏರ್ಪಡಿಸುತ್ತಿರುವ ಭ್ರಾಮರಿ ಯಕ್ಷಮಿತ್ರರು ಸಂಘಟನೆಯ ಕಾರ್ಯ ಶ್ಲಾಘನೀಯ. ಯಕ್ಷಗಾನದ ಸಂದೇಶ ಇಂದಿನ ಜನತೆಗೆ ಅಗತ್ಯವಾಗಿದೆ ಎಂದರು.
ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, ತೌಳವ ನಾಡಿನಲ್ಲಿ ಯಕ್ಷಗಾನಕ್ಕೆ ವಿಶೇಷ ಆದ್ಯತೆ ಇದೆ. ಯಕ್ಷಗಾನವನ್ನು ಉಳಿಸುವ ಕಾರ್ಯವನ್ನು ಎಲ್ಲರೂ ಜತೆಸೇರಿ ಮಾಡಬೇಕಿದೆ ಎಂದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ್ ಭಟ್ ಶುಭಾಸಂಶನೆ ಮಾಡಿದರು. ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಆಗಮಿಸಿ, ಶುಭ ಹಾರೈಸಿದರು. ತೆಂಕುತಿಟ್ಟಿನ ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಅವರಿಗೆ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ, ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘ ಕೈರಂಗಳ ಮತ್ತು ಮನೋಹರ ಎಸ್. ಕುಂದರ್ ಎರ್ಮಾಳ್ ಬಡಾ ಅವರಿಗೆ ‘ಭ್ರಾಮರಿ ಯಕ್ಷಸೇವಾ’ ಪುರಸ್ಕಾರ ಪ್ರದಾನ ಮಾಡಲಾಯಿತು. ಮನೋಹರ ಕುಂದರ್ ಅವರ ಅಪೂರ್ವ ಯಕ್ಷಛಾಯಾಚಿತ್ರಗಳ ಪ್ರದರ್ಶನ ನಡೆಯಿತು.
ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್‌ನ ಸತೀಶ್ ಮಂಜೇಶ್ವರ ಪ್ರಸ್ತಾವಿಸಿ ಸ್ವಾಗತಿಸಿದರು. ವಿನಯಕೃಷ್ಣ ಕುರ್ನಾಡು ವಂದಿಸಿದರು. ಗುರುರಾಜ ಹೊಳ್ಳ ಬಾಯಾರು ನಿರೂಪಿಸಿದರು.
ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಪಂಚವಟಿ, ಕಂಸ ವಿವಾಹ, ಸುಧನ್ವ ಮೋಕ್ಷ ಮತ್ತು ಮಹಿರಾವಣ ಕಾಳಗ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles