26.5 C
Karnataka
Saturday, November 23, 2024

ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ ಸ್ಟಿಕ್ಕರ್
/ ಗುರುತಿನ ಸಂಖ್ಯೆಗಳನ್ನು ಪೊಲೀಸ್‌ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ ದಿನಾಂಕ 24-11-2022ರ ಅಧಿಸೂಚನೆ ಮತ್ತು 23-01-2023 ರ ಮಾರ್ಪಾಡು ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೆÇಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.ಮೋಟಾರು ವಾಹನ ಕಾಯಿದೆಯಂತೆ ಪಾಕಿರ್ಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರೆ ಪ್ರದೇಶಗಳಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles