25.4 C
Karnataka
Thursday, November 21, 2024

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ

ಮಂಗಳೂರು: 2024-25ನೇ ಸಾಲಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಸಾಲ ಯೋಜನೆ:
ಹಿಂದುಳಿದ ವರ್ಗಗಳ ಪ್ರವರ್ಗ-2ಎ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು, ರೂ. 1 ಲಕ್ಷ ವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ ರೂ.20,000 ಗಳ ಸಹಾಯಧನ ಹಾಗೂ ರೂ. 1.01 ಲಕ್ಷದಿಂದ ರೂ. 2 ಲಕ್ಷದವರೆಗೆ ಶೇ.15 ರಷ್ಟು ಕನಿಷ್ಠ ರೂ.20,000/-ಗಳವರೆಗೆ ಗರಿಷ್ಠ ರೂ.30,000/- ಸಹಾಯಧನ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಗಂಗಾ ಕಲ್ಯಾಣ ನೀರಾವರಿ ಯೋಜನೆ:
ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನಾಂಗದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ರೂ.3.75 ಲಕ್ಷಗಳು ಇದರಲ್ಲಿ ವಿದ್ಯುದ್ಧೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಮೆಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/-ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

ಅರಿವು-ಶೈಕ್ಷಣಿಕ ಸಾಲ ಯೋಜನೆ:
ಈ ಯೋಜನೆಯಡಿ ಸಿಇಟಿ ಮತ್ತು ನೀಟ್ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋಸ್ರ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋಸ್ರ್ಗಳ ವ್ಯಾಸಂಗಕ್ಕೆ ವಾರ್ಷಿಕ ರೂ. 1 ಲಕ್ಷ ರೂ. ಗಳಂತೆ ಕೋರ್ಸ್ ಅವಧಿಗೆ ಗರಿಷ್ಠ 4 ಲಕ್ಷ ರೂ. ಗಳಿಂದ ರೂ 5 ಲಕ್ಷ ರೂ. ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ:
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೆÇೀಸ್ಟ್ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಚರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8.00ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. ಕಿS Woಡಿಟಜ ಖಚಿಟಿಞiಟಿg 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ 10 ಲಕ್ಷ ಹಾಗೂ ಪೂರ್ಣ ಕೋರ್ಸ್ ಅವಧಿಗೆ ರೂ. 20 ಲಕ್ಷ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ ಜಾಮೀನುದಾರ/ ಪೆÇೀಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ ವಿದ್ಯಾರ್ಥಿಯ ವಿಸಾ ಪಾಸ್ ಪೆÇೀರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು.

ಸ್ವಾವಲಂಬಿ ಸಾರಥಿ ಯೋಜನೆ:
ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನಾಂಗದ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್‍ಗಳಿಂದ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಟ ರೂ.3 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ):
ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು ಗರಿಷ್ಠ ರೂ.1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್ನಿಂದ ಸಾಲ ಪಡೆಯುವ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು,

ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ವನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ www.dbcdc.karnataka.gov.in ಮಾಹಿತಿಯನ್ನು ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832, 8050770004 ಅಥವಾ 8050770005. ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 0824-2456544 ಸಂಪರ್ಕಿಸುವಂತೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles