ಮಂಗಳೂರು: ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆ.19ರಂದು ನಗರದಲ್ಲಿ ಪಾದಯಾತ್ರೆ, ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
.ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಲಾಲ್ ಭಾಗ್ ನ ಮಹಾತ್ಮ ಗಾಂಧಿ ಪ್ರತಿಮೆವರೆಗೆ ಪಾದಯಾತ್ರೆ ನಡೆಸಿ ಬಳಿಕ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಈ ಸಂದರ್ಭ ಕೆಪಿಸಿಸಿ ಉಪಾಧ್ಯಕ್ಷ, ವಿಧಾನಪರಿಷತ್ ಶಾಸಕ, ದ.ಕ.ಜಿಲ್ಲಾ ಕೆಪಿಸಿಸಿ ವೀಕ್ಷಕರೂ ಆಗಿರುವ ಪ್ರಕಾಶ್ ರಾಥೋಡ್ ಸೇರಿದಂತೆ ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೆ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
