ಮಂಗಳೂರು:2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ/ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ ನಲ್ಲಿ ನೀಡಲಾದ Linkfaculty.mangaloreuniversity.in ರಲ್ಲಿ ಆಗಸ್ಟ್ 26 ರೊಳಗೆ ಸಲ್ಲಿಸಬೇಕು.
ವಿಭಾಗಗಳು :-
ಕನ್ನಡ, ಜಿಯೋ ಇನ್ಫಮ್ರ್ಯಾಟಿಕ್ಸ್/ಸಾಗರ ಭೂವಿಜ್ಞಾನ, ಇಂಗ್ಲೀμï, ಮೆಟೀರಿಯಲ್ಸ್ ಸೈನ್ಸ್,
ಇತಿಹಾಸ, ಪರಿಸರ ವಿಜ್ಞಾನ, ಅರ್ಥಶಾಸ್ತ್ರ, ಸಸ್ಯಶಾಸ್ತ್ರ, ರಾಜ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸಮಾಜಶಾಸ್ತ್ರ. ಅಂಕಿಅಂಶಗಳು, ಸಮಾಜ ಕಾರ್ಯ, ವಾಣಿಜ್ಯ/ಎಂ.ಎಚ್.ಆರ್.ಡಿ.,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಹಿಂದಿ,ಭೂಗೋಳಶಾಸ್ತ್ರ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಜೈವಿಕ ವಿಜ್ಞಾನ,ಜೈವಿಕ ರಸಾಯನಶಾಸ್ತ್ರ,ವೈದ್ಯಕೀಯ ಭೌತಶಾಸ್ತ್ರ, ಭೌತಶಾಸ್ತ್ರ ರಸಾಯನಶಾಸ್ತ್ರ, ಕೈಗಾರಿಕಾ ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ
ಕಂಪ್ಯೂಟರ್ ಸಯನ್ಸ್ /ಎಂ.ಸಿ.ಎ., ಎಲೆಕ್ಟ್ರಾನಿಕ್ಸ್, ಸೈಬರ್ ಭದ್ರತೆ, ಆಹಾರ ವಿಜ್ಞಾನ ಮತ್ತು ಪೆÇೀಷಣೆ, ಜೈವಿಕ ತಂತ್ರಜ್ಞಾನ, ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ/ ಯೋಗ ವಿಜ್ಞಾನದಲ್ಲಿ ಪಿಜಿ ಡಿಪೆÇ್ಲಮಾ ಕೋರ್ಸ್, M.B.A.(ಪ್ರವಾಸೋದ್ಯಮ), ಎಂ.ಬಿ.ಎ. (IB), ಇತಿಹಾಸ ಮತ್ತು ಪುರಾತತ್ವ, ಕೊಂಕಣಿ,ತುಳು, ಒM.P.Ed.+B.P.Ed
ಎಂ.ಎಡ್.
ಸಲ್ಲಿಸಬೇಕಾದ ದಾಖಲೆಗಳು ;
ಎಸ್.ಎಸ್.ಎಲ್.ಸಿ. ಅಂಕಪಟ್ಟಿ. ಸ್ನಾತಕ ಮತ್ತು ಸ್ನಾತಕೋತ್ತರ ಅಂಕಪಟ್ಟಿಗಳು ಹಾಗೂ ಪದವಿಅಂಕಪಟ್ಟಿ, ಪ್ರಮಾಣಪತ್ರಗಳು, ಸಂಶೋಧನಾ ಪತ್ರಿಕೆಗಳು (SCOPUS/WOS/UGC-CARELIST). . ಸಂದರ್ಶನ ಸಮಯದಲ್ಲಿ ಪ್ರಮಾಣ ಪತ್ರಗಳು. ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
ಅಭ್ಯರ್ಥಿಗಳು ಗಮನಿಸಬೇಕಾದ ಅಂಶಗಳು:
ಕೊನೆಯ ದಿನಾಂಕದ ನಂತರ ಸ್ವೀಕೃತವಾದ ಮತ್ತು ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಯುಜಿಸಿ ನಿಗದಿಪಡಿಸಿದ ಮಾನದಂಡ ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ಆದೇಶದನುಸಾರ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಈ ಕುರಿತು ವಿಶ್ವವಿದ್ಯಾನಿಲಯದ ತೀರ್ಮಾನವೇ ಅಂತಿಮವಾಗಿರುತ್ತದೆ.
ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಶುಲ್ಕ ರೂ. 250/- ಹಾಗೂÆ( SC/ST/Cat-1 ಅಭ್ಯರ್ಥಿಗಳಿಗೆ ರೂ.125/)ನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್
www.mangaloreuniversity.ac.in £ ನಲ್ಲಿರುವ ಆನ್‍ಲೈನ್ ಪಾವತಿ ಮೂಲಕ “005/60-Guest Faculty Application fee” ಎಂಬ ಲೆಕ್ಕಶೀರ್ಷಿಕೆಗೆ link ಮುಖಾಂತರ ಪಾವತಿಸಿ ಇ-ರಿಸಿಪ್ಟ್ ಅನ್ನು ಅರ್ಜಿಯೊಂದಿಗೆ ತಪ್ಪದೇ ಅಪ್ಲೋಡ್ ಮಾಡಬೇಕು.
ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in £ ನಲ್ಲಿ ಪ್ರಕಟಿಸಲಾಗುವುದು. ನಿಗದಿತ ಶುಲ್ಕ ಪಾವತಿಸದ ಹಾಗೂ ಅಪೂರ್ಣ ದಾಖಲೆಗಳನ್ನು ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅವಶ್ಯಕತೆ ಇದ್ದಲ್ಲಿ ಮಾತ್ರ ಅಗತ್ಯವಿರುವ ಸಂಖ್ಯೆಯ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯ ಕಾಯ್ದಿರಿಸಿದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.