24 C
Karnataka
Friday, November 15, 2024

ಹೆದ್ದಾರಿ ಅಗಲೀಕರಣ – ಮರಗಳ ತೆರವು : ಸೆ. 2ರಂದು ಅಹವಾಲು ಸಭೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ -66 ರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಭೂಸ್ವಾಧೀನಪಡಿಸಿದ ಕೆ.ಪಿ.ಟಿ ಯಿಂದ ನಂತೂರು ವರೆಗಿನÀ ಪದವು, ಕದ್ರಿ ಬಿ ಮತ್ತು ಮರೋಳಿ ಗ್ರಾಮ ವ್ಯಾಪ್ತಿಯಲ್ಲಿನ ಚೈನೇಜ್ 1+900 ರಿಂದ 2.500 ರಲ್ಲಿ 0.350 ಕಿ.ಮೀ ವ್ಯಾಪ್ತಿಯಲ್ಲಿ ನಡೆಯಲಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ 99 ಮರಗಳನ್ನು ಕಡಿಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ಅನ್ವಯ 50 ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಸೆಪ್ಟೆಂಬರ್ 2ರಂದು ಬೆಳಿಗ್ಗೆ ಪೂರ್ವಾಹ್ನ 11.00 ಗಂಟೆಗೆ ವಲಯ ಅರಣ್ಯ ಅಧಿಕಾರಿ ಕಛೇರಿ, ಹೊೈಗೆಬಝಾರ್, ಮಂಗಳೂರು ಇವರ ಕಛೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಸಾರ್ವಜನಿಕರು ಖುದ್ದಾಗಿ ಸಭೆಯಲ್ಲಿ ಹಾಜರಾಗಿ ತಮ್ಮ ಅಭಿಪ್ರಾಯವನ್ನು ಸಲ್ಲಿಸಬಹುದು ಎಂದು ಮಂಗಳೂರು ಉಪವಿಭಾಗ, ವೃಕ್ಷಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles