20.5 C
Karnataka
Friday, November 15, 2024

ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ದ.ಕ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 39 ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ 2024ರ ಕಾರ್ಯಕ್ರಮವು ವೆನ್‍ಲಾಕ್ ಆಸ್ಪತ್ರೆಯ ಸಭಾಂಗಣದಕಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹೆಚ್.ಆರ್ ತಿಮ್ಮಯ್ಯ ಮಾತನಾಡಿ, ಮಾನವನ ಸಾವಿನ ನಂತರ ಕಣ್ಣುಗಳು ಸುಟ್ಟು ಬುದಿಯಾಗುವ ಬದಲು ನೇತ್ರದಾನ ಮೂಲಕ ಇಬ್ಬರು ಅಂಧರಿಗೆ ಬೆಳಕು ನೀಡುವ ಮೂಲಕ ಜೀವ ಸಾರ್ಥಕತೆಯನ್ನು ಪಡೆಯಬೇಕು. ಉಸಿರು ಶಾಶ್ವತವಲ್ಲ ಹೆಸರು ಮಾತ್ರ ಶಾಶ್ವತ. ನಮ್ಮ ಹೆಸರು ಶಾಶ್ವತವಾಗಬೇಕಾದರೆ ನಮ್ಮ ಸಾವಿನ ನಂತರ ಅಂಗಾಂಗ ದಾನ/ ನೇತ್ರದಾನ ಮಾಡಬೇಕು. ಮೂಲಕ ನೇತ್ರದಾನ ಮಹಾದಾನ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ವೆನ್‍ಲಾಕ್ ಸ್ಥಾನಿಕ ವೈದ್ಯಾಧಿಕಾರಿಗಳು ಡಾ| ಸುಧಾಕರ್ ಮಾತನಾಡುತ್ತಾ, ನೇತ್ರದಾನ ಮಾಡುವುದು ಮರಣದ ನಂತರ, ಮರಣದ ಬಗ್ಗೆ ಹೆದರಬಾರದು. ಎಲ್ಲರೂ ನೇತ್ರದಾನ ಮಾಡುವ ಮೂಲಕ ಅಂಧದ ಬಾಳಿಕೆ ಬೆಳಕಾಗುವ! ಮುಂದಿನ ದಿನಗಳಲ್ಲಿ ನೇತ್ರದಾನದ ಕೊರತೆಯಾಗದ೦ತೆ ಮಾಡಬೇಕಾದರೆ ನಾವೆಲ್ಲರೂ ಇಂದೆ ನೇತ್ರದಾನ ನೊಂದವಾಣೆ ಮಾಡಲು ಸೂಚಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಜ್ಯೋತಿ ಕೆ. ಮಾತನಾಡಿ ಈ ವರ್ಷದ “ನಾನು ಈಗ ಸ್ಪಷ್ಟವಾಗಿ ನೋಡುತ್ತೇನೆ” ಎಂಬ ಘೋಷಣೆಯಂತೆ ನೇತ್ರದಾನದ ಮಹತ್ವವನ್ನು ತಿಳಿಸಿದರು.ಡಾ| ಸೌಮ್ಯ ನೇತ್ರ ತಜ್ಞರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ನೇತ್ರದಾನ ಮಹತ್ವದ ಬಗ್ಗೆ ಮಾಹಿತಿ ನೀಡಿದರು.ಡಾ| ಅನಿತಾ ಕಿರಣ್ ಹಿರಿಯ ನೇತ್ರ ತಜ್ಞರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಹಾಗೂ ಕಚೇರಿ ಸಿಬ್ಬಂದಿಗಳು ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಅಧಿಕಾರಿ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ಸುದರ್ಶನ್, ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles