20.5 C
Karnataka
Friday, November 15, 2024

ಅತ್ಯುತ್ತಮ ಅಂಚೆ ವಿಮಾ ಯೋಜನೆ :ಸುಧಾಕರ ಮಲ್ಯ

ಮಂಗಳೂರು: ಅಂಚೆ ಅಪಘಾತ ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಪತ್ರಕರ್ತರ ಕ್ಷೇಮಾ ಭಿವೃದ್ಧಿ ಯೋಜನೆಯಿಂದ ಪತ್ರಿಕಾ ಭವನದ ಲ್ಲಿ ರವಿವಾರ ಹಮ್ಮಿಕೊಂಡ ಅಂಚೆ ಅಪಘಾತ ವಿಮಾಯೋಜನೆಯ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾ ಡುತ್ತಿದ್ದರು.
ಅಂಚೆ ಇಲಾಖೆಯ ಅಪಘಾತ ವಿಮಾಯೋಜನೆ ಆದಿತ್ಯ ಬಿರ್ಲಾ ಸಂಸ್ಥೆಯ ಜೊತೆ ಒಡಂಬಡಿಕೆಯೊಂದಿಗೆ ಜಾರಿಯಾಗಿದೆ ಇದನ್ನು ಇದು 10 ಮತ್ತು 15ಲಕ್ಷ ರೂಪಾಯಿ ಮೊತ್ದ ಅಪಘಾತ ವಿಮಾಯೋಜನೆಗೆ ಕ್ರಮವಾಗಿ ರೂ. 549,ರೂ.749 ವಿಮಾ ಕಂತು ಪಾವತಿಸಿದ ಬಳಿಕ ಯಾವುದೇ ಅಂಚೆ ಕಚೇರಿಯ ಮೂಲಕ ದಾಖಲೆ ಸಲ್ಲಿಸಿ ಸಣ್ಣ ಪುಟ್ಟ ಅಪಘಾತ ಸಂಭವಿಸಿದಾಗ ನಿರ್ದಿಷ್ಟ ವಿಮಾ ಪರಿಹಾರ ಮೊತ್ತ ಪಡೆಯಬಹುದು. ಶಾಶ್ವತ ಅಂಗ ವೈಕಲ್ಯದ ಸಂದರ್ಭದಲ್ಲಿ ಮತ್ತು ಮರಣ ಸಂದರ್ಭದಲ್ಲಿ ಪೂರ್ಣ ಪ್ರಮಾಣದ ವಿಮಾ ಮೊತ್ತ ಪಡೆಯಬಹುದು ಎಂದು ಸುಧಾಕರ ಮಲ್ಯ ವಿವರಿಸಿದರು.
ಪತ್ರಕರ್ತರಿಗೆ ವಿಮಾ ನೋಂದಾವಣೆ ಉಚಿತ ವಾಗಿದೆ.ಪ್ರತಿಯೊಬ್ಬರ ವಿಮಾ ವಾರ್ಷಿಕ ಪಾಲಿಸಿ ರೂ.549 ವೆಚ್ಚವನ್ನು ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆ ಯಿಂದ (ಒಂದು ವರ್ಷಕ್ಕೆ ) ಪಾವತಿಸ ಲಾಗುತ್ತಿದೆ ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾಹಿತಿ ನೀಡಿದರು.
ಇಂಡಿಯನ್ ಪೋಸ್ಟಲ್ ಬ್ಯಾಂಕ್ ಮಂಗಳೂರು ಇದರ ವ್ಯವಸ್ಥಾಪಕ ಶಿಯಾಝ್ ಬಿ,, ಮಂಗಳೂರು ಪ್ರದಾನ ಅಂಚೆ ಕಚೇರಿಯ ಅಸಿಸ್ಟೆಂಟ್ ಪೋಸ್ಟ ಮಾಸ್ಟರ್, ಎಚ್ .ಆರ್. ಚಂದ್ರಶೇಖ ರ್ ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ನಿಕಟ ಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯ ಆರಿಫ್ ಪಡುಬಿದ್ರೆ,ಸಂದೇಶ್ ಜಾರ,ಸತೀಶ್ ಇರಾ ಮೊದಲಾದವರು ಉಪಸ್ಥಿತರಿದ್ದರು.
ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles