ಮಂಗಳೂರು: ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ. ತ. ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ “ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ : ಮುನ್ನೋಟ” ವಿದ್ವಾಂಸರೊಂದಿಗೆ ಸಮಾಲೋಚನ ಗೋಷ್ಠಿಯು ಸೆಪ್ಟೆಂಬರ್ 4ರಂದು ಬೆಳಗ್ಗೆ 10.30 ಗಂಟೆಗೆ ನಗರದ ಉರ್ವಸ್ಟೋರ್ ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ನಡೆಯಲಿದೆ.
ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಕೇಂದ್ರವು, ರಾಜ್ಯ ಸರ್ಕಾರವು ಸ್ಥಾಪಿಸಿರುವ ಒಂದು ಸ್ವಾಯತ್ತ ಸಂಸ್ಥೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟಿದೆ. 2012 ರಲ್ಲಿ ಸ್ಥಾಪಿತವಾದ ಈ ಅಧ್ಯಯನ ಕೇಂದ್ರವು ಕನಕದಾಸರು ಮತ್ತು ಇತರೆ ಸಂತರ ಬಗ್ಗೆ ಅಧ್ಯಯನ, ಸಂಶೋಧನೆ, ಪ್ರಕಟಣೆ, ಪ್ರಸಾರ ಕಾರ್ಯಗಳನ್ನು ನಿರ್ವಹಿಸುತ್ತಾ ಬರುತ್ತಿದೆ. ಹಾಗೆಯೇ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ತೌಲನಿಕ ಸಂಶೋಧನೆಗಳನ್ನು, ಕಮ್ಮಟಗಳನ್ನು ನಡೆಸುತ್ತಿದೆ.