ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ನಾರೀಕೇಳ ಮಹಾಗಣಾಯಾಗವು ಸೆಪ್ಟೆಂಬರ್ 7ರಿಂದ 9ರವರೆಗೆ ಮಂಗಳೂರಿನ ‘ಓಂಕಾರ ನಗರ’, ಬಂಟ್ಸ್ ಹಾಸ್ಟೆಲ್ ಇಲ್ಲಿ ಜರಗಲಿದೆ ಎಂದು ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ ಆಶಾಜ್ಯೋತಿ ರೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸೆ.6.ರ೦ದು ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ರಾಮದಾಸ್ ಆಚಾರರವರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಟ್ನ ‘ಓಂಕಾರ ನಗರ’ಕ್ಕೆ ಬರಮಾಡಿಕೊಳ್ಳುವುದು.
ಸೆ.7ರ ಬೆಳಿಗ್ಗೆ 8 ಗಂಟೆಗೆ ಧ್ವಜರೋಹಣಾ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತೆನೆ ವಿತರಣಾ ಕಾರ್ಯಕ್ರಮ ಜರಗುವುದು. ಸಂಜೆ ಗಂಟೆ 5ರಿಂದ 7 ರವರೆಗೆ ಭಾರ್ಮಿಕ ಸಭಾ ಕಾರ್ಯಕ್ರಮ
ಜರಗಲಿರುವುದು. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಸಾಧಕರಿಗೆ ಸನ್ಮಾನಿಸಲಾಗುವುದು ಎಂದರು.
ರಾತ್ರಿ ಗಂಟೆ 8 ರಿ೦ದ ರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು.
ಸೆ.8 ರ ಸ೦ಜೆ 5ರಿಂದ 7ರವರೆಗೆ ಧಾರ್ಮಿಕ ಸಭೆ ನಡೆಯುವುದು. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಸಾಧಕರಿಗೆ ಸನ್ಮಾನಿಸಲಾಗುವುದು. ರಾತ್ರಿ 8 ರಿ೦ದ
ಎಸ್.ಡಿ.ಎಂ ಕಲಾವೈಭವ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿರುವುದು ಎಂದು ಸಂಚಾಲಕ ದಿವಾಕರ ಸಾಮಾನಿ ಚೇಳಾರ್ ಗುತ್ತು ತಿಳಿಸಿದರು.
ಸೆ.9ರ೦ದು ಬೆಳಿಗ್ಗೆ ಗಂಟೆ 8ರಿಂದ ಲೋಕಕಲ್ಯಾಣಾರ್ಥವಾಗಿ ಅಷ್ಟೋತ್ತರ ಸಹಸ್ರನಾರಿಕೇಳ ಮಹಾಗಣಾಯಾಗ ಆರಂಭಗೊಂಡು ಬೆಳಿಗ್ಗೆ ಗಂಟೆ 11.30ಕ್ಕೆ ಪೂರ್ಣಾಹುತಿಗೊಳ್ಳಲಿದೆ. ಮಧ್ಯಾಹ್ನ 3.30ಕ್ಕೆ ಸಮಾಜದ ವಿವಿಧ ಗಣ್ಯರಿಂದ ಶೋಭಾಯಾತ್ರೆಗೆ ಚಾಲನೆ ದೊರೆಯಲಿದ್ದು, ಶೋಭಾಯಾತ್ರೆಯು ‘ಓಂಕಾರ ನಗರ’ದಿಂದ ಶ್ರದ್ಧಾ ಭಕ್ತಿಯಿಂದ ಹೊರಟು ಜಿಲ್ಲೆಯ ವಿವಿಧ ಭಜನಾ ತಂಡಗಳಿಂದ ಶೋಭಾಯಾತ್ರೆಯು ಬಂಟ್ಸ್ ಹಾಸ್ಟೇಲ್, ಪಿ.ಪಿಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನ ರಸ್ತೆಯಲ್ಲಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಗುವುದು.ಈ ಮೂರು ದಿನಗಳ ಕಾಲ ವೈದಿಕ ಕಾರ್ಯಕ್ರಮಗಳೊಂದಿಗೆ ವಿವಿಧ ಪೂಜೆಗಳು ಜರಗಲಿರುವುದು. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಬಂಟ ಸಮಾಜಬಾಂಧವರು ಮತ್ತು ಸಾರ್ವಜನಿಕರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಗಣೇಶೋತ್ಸವದ ವೇದಿಕೆಯಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿರುವುದು.
ಪತ್ರಿಕಾಗೋಷ್ಟಿಯಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರಾದ ಕೃಷ್ಣಪ್ರಸಾದ್ ರೈ, . ವಸಂತ ಶೆಟ್ಟಿ, , ಮನೀಶ್ ರೈ, ಅಶ್ವಥಾಮ ಹೆಗ್ಡೆ, ಸಂತೋಷ್ ಕುಮಾರ್ ಶೆಡ್ಡೆ, ಉಪಸ್ಥಿತರಿದ್ದರು.